ಕನ್ನಡಪ್ರಭ ವಾರ್ತೆ ಬೆಂಗಳೂರು
ಜೆಡಿಎಸ್ ಮಹಿಳಾ ಘಟಕ ಭಾನುವಾರ ನಗರದ ಡಾ.ಬಾಬು ಜಗಜೀವನ ರಾಮ್ ಭವನದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಶೇ.33ರಷ್ಟು ಮೀಸಲಾತಿ ಜಾರಿಯಾದರೆ, 75-80 ಮಂದಿ ಮಹಿಳೆಯರು ವಿಧಾನಸಭೆಗೆ ಸ್ಪರ್ಧಿಸಬೇಕಾಗುತ್ತದೆ ಎಂದರು.
ಮಹಿಳೆಯರಿಗೆ ಹೆಚ್ಚು ಅವಕಾಶ:ಮುಂಬರುವ ಜಿಬಿಎ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಹೆಚ್ಚು ಮಹಿಳೆಯರು ಸ್ಪರ್ಧೆ ಮಾಡಬೇಕು. ಜಿಬಿಎ ಪಂಚ ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಜೆಡಿಎಸ್‌ಗೆ ಎಷ್ಟು ವಾರ್ಡ್‌ಗಳಲ್ಲಿ ಸ್ಪರ್ಧಿಸುವ ಶಕ್ತಿ ಇದೆ ಎಂಬುದನ್ನು ಗಮನಿಸಿ. ಬಳಿಕ ಮಹಿಳೆಯರಿಗೆ ಎಷ್ಟು ಜನರಿಗೆ ಅವಕಾಶ ನೀಡಬಹುದು ಎಂದು ತೀರ್ಮಾನ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸ್ಪರ್ಧೆ ಮಾಡಿದಾಗ ಮಾತ್ರ ಮಹಿಳಾ ಮೀಸಲಿಗೆ ಅರ್ಥ ಬರುತ್ತದೆ ಎಂದು ದೇವೇಗೌಡರು ಅಭಿಪ್ರಾಯಪಟ್ಟರು.
ಮಹಿಳೆಯರಿಗೆ ಜೆಡಿಎಸ್ ದೊಡ್ಡ ಕೊಡುಗೆ:
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಂಚರತ್ನ ಯೋಜನೆ ಭರವಸೆ ನೀಡಿದ್ದರು. ಉಚಿತ ಆರೋಗ್ಯ, ಉಚಿತ ಶಿಕ್ಷಣ, ಉಚಿತ ಆರೋಗ್ಯ ಕೊಡುತ್ತೇನೆ ಎಂದು ಹೇಳಿದ್ದರು. ಆದರೂ ಮಹಿಳೆಯರು ಎರಡು ಸಾವಿರ ರು.ಗೆ ಮಾರು ಹೋದರು. ಪಂಚರತ್ನದಂಥ ಉತ್ತಮ ಕಾರ್ಯಕ್ರಮಗಳು ಜನರಿಗೆ ಅರ್ಥ ಆಗಲಿಲ್ಲ. ಗ್ಯಾರಂಟಿ ಯೋಜನೆಗಳಿಂದ ತಾತ್ಕಾಲಿಕ ಉಪಯೋಗ ಸಿಗಬಹುದು. ಇದರಿಂದ ಜೀವನ ರೂಪಿಸಿಕೊಳ್ಳಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.