ಶಿಕ್ಷಣ ಕ್ಷೇತ್ರಕ್ಕೆ 33 ಸಾವಿರ ಕೋಟಿ ಅನುದಾನ : ಶಾಸಕ ಎಸ್.ಆರ್. ಶ್ರೀನಿವಾಸ್

KannadaprabhaNewsNetwork |  
Published : Jun 14, 2025, 01:01 AM ISTUpdated : Jun 14, 2025, 01:08 PM IST
ಗುಬ್ಬಿತಾಲ್ಲೂಕಿನ ಲಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ, ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ ಉದ್ಘಾಟಿಸಿದ ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. | Kannada Prabha

ಸಾರಾಂಶ

ಈಗಿನ ಮಕ್ಕಳ ಜ್ಞಾನ ಸಂಪಾದನೆಯನ್ನು ತಾಯಿಯ ಗರ್ಭದಲ್ಲಿದ್ದಾಗಲೇ ರೂಪಿಸಿಕೊಳ್ಳುತ್ತವೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

  ಗುಬ್ಬಿ : ಈಗಿನ ಮಕ್ಕಳ ಜ್ಞಾನ ಸಂಪಾದನೆಯನ್ನು ತಾಯಿಯ ಗರ್ಭದಲ್ಲಿದ್ದಾಗಲೇ ರೂಪಿಸಿಕೊಳ್ಳುತ್ತವೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. 

ತಾಲೂಕಿನ ಲಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ, ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಯುವಜನತೆ ಯಾವುದೇ ಉದ್ಯೋಗಕ್ಕೆ ಸೇರಬೇಕಾದರೆ ಅವರು ಪಡೆದ ಅಂಕದ ಆಧಾರದ ಮೇಲೆ ಸೇರಿಕೊಳ್ಳುತ್ತಾರೆ. 

ಅನುತ್ಪಾದಕ ಕ್ಷೇತ್ರವಾದ ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರ್ಕಾರ 33,000 ಕೋಟಿ ರುಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ವಿದ್ಯಾಭ್ಯಾಸ ಕಲಿಸಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ಕಲಿಕೆ ಅನಿವಾರ್ಯವಾಗಿದೆ. ಈ ಶಾಲೆಗೆ ಕೊಠಡಿಗಳ ಅವಶ್ಯಕತೆ ಇದ್ದಲ್ಲಿ ನನ್ನ ಗಮನಕ್ಕೆ ತಂದರೆ ಈ ಬಾರಿ ಮಂಜೂರು ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ ದೊಡ್ಡನೆಟ್ಟಕುಂಟೆ ಗ್ರಾಮದ ವಿದ್ಯಾರ್ಥಿಗಳು ಶಾಸಕರಿಗೆ ಜಲ್ಲಿ ರಸ್ತೆ ಮಾಡಿಸಬೇಕು ಎಂದು ಮನವಿ ನೀಡಿದರು. ಶಾಲೆಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

 ಹಾಗೂ ಎಲ್ ಕೆ ಜಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್ ವಿತರಣೆ ಮಾಡಲಾಯಿತು.ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಮೂರ್ತಿ ಮಾತನಾಡಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಸಹಕಾರ ಪಡೆದು ಕಡಿಮೆ ಖರ್ಚಿನಲ್ಲಿ ಇಂಗ್ಲಿಷ್ ಮಾಧ್ಯಮ ಎಲ್ಲರಿಗೂ ಸಿಗಲೆಂದು ಈ ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಪ್ರಾರಂಭಿಸಿದ್ದೇವೆ ಎಂದರು.ರಕ್ಷಣ ಇಲಾಖೆಯ ರಘುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಳ್ಳಿಯ ಶಾಲೆಯಲ್ಲಿ ಮಾತೃ ಭಾಷೆಯಲ್ಲಿ ಕಲಿತವರು ಉನ್ನತ ಹುದ್ದೆ ಅಲಂಕರಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಗೋವಿಂದರಾಜು, ಗ್ರಾ ಪಂ ಅದ್ಯಕ್ಷ ಯೋಗೀಶ್, ದಿನಕರ್‌ಮೂರ್ತಿ ಇಸಿಒ ನಿಜಾನಂದಮೂರ್ತಿ,ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ಸಿ.ಆರ್.ಪಿ ಶಶಿಕಲಾ, ಗ್ರಾಮ ಪಂಚಾಯತಿ ಸದಸ್ಯರಾದ ಭಾಗ್ಯಮ್ಮ ಪಾಂಡುರಂಗಯ್ಯ, ಕೃಷ್ಣಮೂರ್ತಿ, ಮಹೇಂದ್ರ ಕುಮಾರ್, ಮಾಜಿ ಸದಸ್ಯರಾದ ಉದಯ ಕುಮಾರ್, ಪಿಡಿಒ ಶೇಖರ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕಿ ಶಿವಮ್ಮ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಯೋಗಾನಂದ್, ಮುಖ್ಯ ಶಿಕ್ಷಕ ಲಕ್ಷ್ಮಣ್, ನಿ.ದೈ. ಶಿಕ್ಷಣ ಉಪನ್ಯಾಸಕ ಎಲ್.ಎಸ್.ಶಿವರಾಮಯ್ಯ, ಹಾಗೂ ಎಸ್.ಡಿ.ಎಂ.ಸಿ. ಸಮಿತಿಯವರು, ಹಳೆಯ ವಿದ್ಯಾರ್ಥಿ ವೃಂದದವರರು, ಸುತ್ತಮುತ್ತಲ ಗ್ರಾಮಸ್ಥರು ಮತ್ತು ಎಂ.ಎಚ್. ಪಟ್ಟಣ ಗ್ರಾಮ ಪಂಚಾಯ್ತಿಯ ಎಲ್ಲಾ ಸದಸ್ಯರು, ಶಿಕ್ಷಕರು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''