ಮುಂಡಗೋಡ: ಮನೆಯೊಂದರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಬೇಟೆಯಾಡಿ ದಾಸ್ತಾನು ಮಾಡಲಾದ ಸುಮಾರು ೩೫ ಕೆಜಿ ಕಾಡುಹಂದಿ ಮಾಂಸವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಪಟ್ಟಣದ ಗಾಂಧಿನಗರದಲ್ಲಿರುವ ಸುರೇಶ ಕೊರವರ ಅವರ ಬಾಡಿಗೆ ಮನೆಯಲ್ಲಿ ಇಬ್ಬರೂ ಸೇರಿಕೊಂಡು ಕಾಡುಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ ತಯಾರಿಸುತ್ತಿದ್ದರು ಎನ್ನಲಾದ ಬಗ್ಗೆ ಖಚಿತ ಮಾಹಿತಿ ಪಡೆದ ಮುಂಡಗೋಡ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿದ್ದಾರೆ.
ಈ ವೇಳೆ ಅರಣ್ಯಾಧಿಕಾರಿಗಳನ್ನು ಕಂಡು ಓರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಮತ್ತೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಮನೆಯಲ್ಲಿದ್ದ ಸುಮಾರು ೩೫ ಕೆಜಿ ಕಾಡುಹಂದಿ ಮಾಂಸವನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ರ ಅಡಿಯಲ್ಲಿ ಅರಣ್ಯ ಮೊಕದ್ದಮೆ ದಾಖಲಿಸಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನ್ಯಾಯಾಲಯವು ಡಿ. ೪ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪರಾರಿಯಾಗಿರುವ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಯಲ್ಲಾಪುರ: ಹೋಂ ಇಂಡಸ್ಟ್ರೀ ಮೂಲಕ ಉಪ್ಪಿನಕಾಯಿ ಖರೀದಿಸಿದ ಉದ್ಯಮಿಯೊಬ್ಬ ಲಕ್ಷಾಂತರ ರು. ಹಣ ನೀಡದೇ ವಂಚಿಸಿದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಟ್ಟು ₹1.83 ಲಕ್ಷ ಮೌಲ್ಯದ 14 ಬಗೆಯ ಉಪ್ಪಿನಕಾಯಿಯನ್ನು ತನ್ನ ಕಂಪನಿಯ ಹೆಸರಿನಲ್ಲಿ ಖರೀದಿ ಮಾಡಿದ್ದರು. ಆದರೆ ಅದರ ಹಣ ಪಾವತಿಸಿರಲಿಲ್ಲ. ಪದೇ ಪದೇ ಕೇಳಿದಾಗ ಕಳೆದ ಜೂನ್ ತಿಂಗಳಲ್ಲಿ ಎರಡು ಕಂತುಗಳ ಮೂಲಕ ₹15 ಸಾವಿರ ಪಾವತಿಸಿದ್ದರು.