ರಾಜ್ಯದ 35 ಮಂದಿಗೆ ರಾಷ್ಟ್ರಪತಿ ಭೇಟಿ ಭಾಗ್ಯ!

KannadaprabhaNewsNetwork |  
Published : Feb 26, 2024, 01:32 AM ISTUpdated : Feb 26, 2024, 03:11 PM IST
President Droupadi Murmu

ಸಾರಾಂಶ

ಮಾ.1ರಂದು ದೆಹಲಿಯಲ್ಲಿ ರಾಷ್ಟ್ರಪತಿ ಭೇಟಿ ಮಾಡಲು 35 ಮಂದಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಅವಕಾಶ ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಕರ್ನಾಟಕದ 35 ಮಂದಿಗೆ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಭಾಗ್ಯ ಒದಗಿಬಂದಿದೆ. ಇದರಲ್ಲಿ ದಕ್ಷಿಣ ಕನ್ನಡದ ಆದಿವಾಸಿ ಸಮುದಾಯದ ನಾಲ್ವರು ಮಹಿಳೆಯರು ಸಹ ಇದ್ದಾರೆ. 

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆ ಇದಾಗಿದ್ದು, ‘ಸಂಜೀವಿನೀ’- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. 

ಮಾ. ೧ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್‌ ಉದ್ಯಾನವನಕ್ಕೆ ಭೇಟಿ ನೀಡಲು ಇವರಿಗೆ ಅವಕಾಶ ದೊರೆತಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರ ಕನ್ನಡ, ಚಾಮರಾಜನಗರದಿಂದ ಒಟ್ಟು ೩೫ ಮಂದಿ ದೆಹಲಿಗೆ ತೆರಳಲಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನ ಮೀನಾಕ್ಷಿ , ವನಿತಾ, ಬೆಳ್ತಂಗಡಿ ತಾಲೂಕಿನ ಲಕ್ಷ್ಮೀ, ಬಂಟ್ವಾಳ ತಾಲೂಕಿನ ಸುಂದರಿ ದೆಹಲಿ ಪ್ರವಾಸ ಭಾಗ್ಯ ಪಡೆದವರು.

ಫೆ. ೨೮ರಂದು ಮಧ್ಯಾಹ್ನ ರಾಜ್ಯಮಟ್ಟದ ಅಧಿಕಾರಿಗಳು ಇವರ ಜೊತೆ ಸಂವಾದ ನಡೆಸುವರು. ಫೆ. ೨೯ರಂದು ಮುಂಜಾನೆ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. 

ಮಾ.೧ರಂದು ಬೆಳಗ್ಗೆ ರಾಷ್ಟ್ರಪತಿ ಭೇಟಿ ಹಾಗೂ ಅಮೃತ ಉದ್ಯಾನ ಭೇಟಿಗೆ ಅವಕಾಶ ಸಿಗಲಿದೆ. ಅದೇ ದಿನ ರಾತ್ರಿ ರಾಜ್ಯಕ್ಕೆ ವಾಪಸಾಗಲಿದ್ದಾರೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ