)
ಕನ್ನಡಪ್ರಭ ವಾರ್ತೆ ನವದೆಹಲಿ:
ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಹಾಗೂ ನ್ಯಾ.ವಿನೋದ್ ಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ ಈ ಮಹತ್ವದ ತೀರ್ಪು ನೀಡಿದೆ.ಪ್ರಕರಣವೇನು?:
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2011ರ ನವೆಂಬರ್‌ನಲ್ಲಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಪರೀಕ್ಷೆಗಳನ್ನು ನಡೆಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಬಳಿಕ, ನೇಮಕಾತಿಯ ಸಂದರ್ಶನ ಮತ್ತು ಅಂಕ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ ಹಾಗೂ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು.ಈ ಕುರಿತು ಅಭ್ಯರ್ಥಿಯೊಬ್ಬರು ಅಂದಿನ ಅಡ್ವೋಕೇಟ್ ಜನರಲ್‌ಗೆ ದೂರು ನೀಡಿದ್ದರು. ಅವರ ಶಿಫಾರಸ್ಸಿನ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. 2014ರ ಜೂನ್ 27ರಂದು ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಆದರೆ, ಕೆಎಟಿಯ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಬಳಿಕ, ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ 362 ಅಭ್ಯರ್ಥಿಗಳ ಆಯ್ಕೆ ಮತ್ತು ನೇಮಕಾತಿಯನ್ನು ಊರ್ಜಿತಗೊಳಿಸಲು 2022ರಲ್ಲಿ ರಾಜ್ಯ ಸರ್ಕಾರ ‘ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್‌ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಕಾಯ್ದೆ’ ಯನ್ನು ಜಾರಿಗೆ ತಂದಿತ್ತು.
ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಶಕಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿದ್ದ ಕಾನೂನು ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಈ ವಿವಾದದ ನಡುವೆಯೂ ನೇಮಕಗೊಂಡು ಪ್ರಸ್ತುತ ವಿವಿಧ ಇಲಾಖೆಗಳ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 362 ಕೆಎಎಸ್ ಅಧಿಕಾರಿಗಳ ಭವಿಷ್ಯ ಅತಂತ್ರವಾಗಿದೆ.