371(ಜೆ) ಸಚಿವ ಸಂಪುಟದ ಉಪಸಮಿತಿ ಪುನಾರಚನೆ

KannadaprabhaNewsNetwork |  
Published : Sep 29, 2026, 01:30 AM IST
 | Kannada Prabha

ಸಾರಾಂಶ

ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆಗಾಗಿ ರಚಿಸಲಾಗಿದ್ದ ಸಚಿವ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ಪುನರ್ ರಚಿಸಿ ಆದೇಶಿಸಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆಗಾಗಿ ರಚಿಸಲಾಗಿದ್ದ ಸಚಿವ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ಪುನರ್ ರಚಿಸಿ ಆದೇಶಿಸಿದೆ.

ಪುನರ್ ರಚಿಸಲಾದ ಉಪಸಮಿತಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ, ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಉಪಸಮಿತಿಯ ಅಧ್ಯಕ್ಷರಾಗಿದ್ದರು. ಇದೀಗ ಅವರನ್ನು ಸದಸ್ಯರನ್ನಾಗಿ ಮುಂದುವರಿಸಲಾಗಿದೆ.

371(ಜೆ) ಅಡಿ ಕಲ್ಯಾಣ ಕರ್ನಾಟಕಕ್ಕೆ ದೊರೆತಿರುವ ವಿಶೇಷ ಸ್ಥಾನಮಾನದ ಅನುಷ್ಠಾನಕ್ಕೆ ಸಂಬಂಧಿಸಿದ ಆದೇಶಗಳು ಹಾಗೂ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳ ಕುರಿತು ಉಪಸಮಿತಿ ಕಾರ್ಯನಿರ್ವಹಿಸಲಿದೆ.

ಕರ್ನಾಟಕ ಸರ್ಕಾರದ ವ್ಯವಹಾರ ನಿರ್ವಹಣಾ ನಿಯಮಗಳು, 1977ರ ನಿಯಮ 13(5) ಹಾಗೂ 2025ರ ಮಾರ್ಚ್ 15ರ ಸುತ್ತೋಲೆಯನ್ವಯ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯು ಸಚಿವ ಸಂಪುಟ ಉಪಸಮಿತಿಗೆ ಅಗತ್ಯ ನೆರವು ನೀಡಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ (ಸಚಿವ ಸಂಪುಟ) ಜೆ. ಕುಮಾರಸ್ವಾಮಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಪರ ಸಂಘಟನೆಗಳ ಬೆಂಬಲದೊಂದಿಗೆ ಗಣೇಶ ಮೂರ್ತಿಗಳ ವಿಸರ್ಜನೆ
ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತಸಂಘದಿಂದ ಪ್ರತಿಭಟನೆ