ರಾಜ್ಯ ಸರ್ಕಾರಕ್ಕೆ 3ರ ಸಂಭ್ರಮ: ಉದಯ ಶೆಟ್ಟಿ ಅಭಿನಂದನೆ

KannadaprabhaNewsNetwork |  
Published : May 22, 2026, 03:00 AM IST
ಮುನಿಯಾಲು | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿರುವುದು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳದ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಪ್ರಭವಾರ್ತೆ ಕಾರ್ಕಳ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿರುವುದು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳದ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಮೂರನೇ ವರ್ಷದ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟದ ಸಚಿವರು ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರವು ಜನಸಾಮಾನ್ಯರ ಬದುಕಿಗೆ ಸ್ಪಂದಿಸುವ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶ್ಲಾಘಿಸಿದ್ದಾರೆ.

ಕೋವಿಡ್ ನಂತರದ ದಿನಗಳಲ್ಲಿ ಉದ್ಯೋಗ ನಷ್ಟ, ಬೆಲೆ ಏರಿಕೆ ಹಾಗೂ ಕುಸಿದ ಆರ್ಥಿಕತೆಯಿಂದ ಹೈರಾಣಾಗಿದ್ದ ಜನಸಾಮಾನ್ಯರ ಬದುಕನ್ನು ಮೇಲೆತ್ತಲು ಕಾಂಗ್ರೆಸ್ ಸರ್ಕಾರವು ದೇಶದಲ್ಲೇ ಪ್ರಪ್ರಥಮ ಬಾರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಯುವಜನತೆ ಮತ್ತು ದುರ್ಬಲ ವರ್ಗದವರಿಗೆ ನೇರ ಪ್ರಯೋಜನ ತಲುಪಿಸುವ ಮೂಲಕ ಸರ್ಕಾರ ಜನರಿಗೆ ಆಸರೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತದ ದಿಕ್ಕಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಜನರಲ್ಲಿ ಹೊಸ ವಿಶ್ವಾಸ ಮೂಡಿಸಿವೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದವರ ಹಿತಾಸಕ್ತಿಯನ್ನು ಕಾಯುವ ಕೆಲಸ ನಿರಂತರವಾಗಿ ನಡೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು, ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರ ಯಶಸ್ವಿಯಾಗಲಿ ಎಂದು ಹಾರೈಸಿದ ಉದಯ ಶೆಟ್ಟಿ ಮುನಿಯಾಲು ಅವರು, ಮೂರು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟದ ಎಲ್ಲ ಸಚಿವರು ಹಾಗೂ ಶಾಸಕರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕುಂಠಿತ
ಈರಣ್ಣ ಮೆಳ್ಳಿಗೇರಿ ತಂಡಕ್ಕೆ ಪ್ರಿಮಿಯರ್ ಲೀಗ್, ನಗದು ₹೨ ಲಕ್ಷ ಬಹುಮಾನ