ಕನ್ನಡಪ್ರಭ ವಾರ್ತೆ ಯಾದಗಿರಿ
ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ್ ಅದಾಲತ್‌ನಲ್ಲಿ ರಾಜಿಯಾಗಬಹುದಾದ ವಿವಿಧ ಪ್ರಕರಣಗಳನ್ನು ಪರಿಗಣಿಸಿ ಪಕ್ಷಗಾರರ ಪರಸ್ಪರ ಒಪ್ಪಿಗೆಯೊಂದಿಗೆ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗುವುದರ ಜತೆಗೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಪ್ರಕರಣಗಳ ವಿವರ: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರೀಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಮತ್ತು ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಹಾಗೂ ಇತರೆ ಪ್ರಕರಣಗಳು ಮತ್ತು ವೈವಾಹಿಕ ಕುಟುಂಬ ನ್ಯಾಯಾಲಯ (ವಿಚ್ಛೇದನೆಯನ್ನು ಹೊರತುಪಡಿಸಿ) ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ನ್ಯಾ. ಎಚ್. ಜೆ. ಮರುಳಸಿದ್ದಾರಾಧ್ಯ ತಿಳಿಸಿದರು.7,237 ಪ್ರಕರಣಗಳ ಇತ್ಯರ್ಥ: ಜುಲೈನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಜರುಗಿದ್ದ ಲೋಕ್ ಅದಾಲತ್‌ನಲ್ಲಿ 7,237 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 3ನೇ ಲೋಕ್ ಅದಾಲತ್‌ನಲ್ಲಿ 4,776 ಪ್ರಕರಣಗಳು ಗುರುತಿಸಲಾಗಿದ್ದು, ಅದರಲ್ಲಿ ಸುಮಾರು 1,440 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥ ಮಾಡಲಾಗಿದೆ. ಒಂದೂವರೆ ವಾರದಲ್ಲಿ ಹೆಚ್ಚಿನ ಪ್ರಕರಣಗಳು ವಿಲೇವಾರಿ ಆಗುವಂತಹ ಎಲ್ಲಾ ಸಾಧ್ಯತೆಗಳಿವೆ ಎಂದು ನ್ಯಾ. ಎಚ್. ಜೆ. ಮರುಳಸಿದ್ದಾರಾಧ್ಯ ತಿಳಿಸಿದರು. ಸದಸ್ಯ ಕಾರ್ಯದರ್ಶಿ ನ್ಯಾ. ಮರಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.