ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನಸ್ವೀಕರಿಸುತ್ತಿದ್ದಂತೆಯೇ ಹುಣಸಗಿ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕನ್ನಡಪ್ರಭ ವಾರ್ತೆ ಹುಣಸಗಿ
ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಹುಣಸಗಿ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರದೊಂದಿಗೆ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಈ ವೇಳೆ ಬಿಜೆಪಿ ತಾಲೂಕಾಧ್ಯಕ್ಷ ಸಂಗಣ್ಣ ಸಾಹುಕಾರ ವೈಲಿ ಮಾತನಾಡಿ, ದೇಶದ ಭದ್ರತೆ ಹಾಗೂ ಉತ್ತಮ ಆಡಳಿತ ಬಯಸಿ ಜನರು ಎನ್‌ಡಿಎ ಒಕ್ಕೂಟಕ್ಕೆ ಸಂಪೂರ್ಣ ಬೆಂಬಲಿಸಿದ ಪರಿಣಾಮ, ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಿದ್ದಾರೆ. ಜತೆಗೆ 72 ಸಚಿವರಿಂದ ಪ್ರಮಾಣ ವಚನ ಸ್ವೀಕರಿಸಿದ್ದು, ದೇಶದ ಪ್ರಗತಿಗೆ ಉತ್ತಮ ಆಡಳಿತ ಸಿಗಲಿದೆ ಎಂದರು.
ಈ ಸಂದರ್ಭ ಮೌನೇಶ ಸಾಹುಕಾರ ಚಿಂಚೋಳಿ, ಆನಂದ ಬಾರಿಗಿಡದ, ಮಲ್ಲು ಹೆಬ್ಬಾಳ, ನಾಗಯ್ಯಸ್ವಾಮಿ ದೇಸಾಯಿ ಗುರು, ಸಿದ್ದು ಮೇಲಿನಮನಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.