ರಾಮನಗರ: ಆದಾಯ ತೆರಿಗೆ ಮತ್ತು ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವ ಕುಟುಂಬಕ್ಕೆ ಸೇರಿರುವ ಜಿಲ್ಲೆಯಲ್ಲಿ 4,756 ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾಗಿದೆ.
ಮಹಿಳೆಯಗೆ ಆರ್ಥಿಕ ಬಲ ತುಂಬಿ ಸ್ವಾವಲಂಬಿಗಳನ್ನಾಗಿ ಮಾಡುವ ಆಶಯದೊಂದಿಗೆ ರಾಜ್ಯ ಸರ್ಕಾರವು ಮಹಿಳೆಯ ಬ್ಯಾಂಕ್ ಖಾತೆಗೆ 2 ಸಾವಿರ ಮೊತ್ತವನ್ನು ನೇರ ನಗದು ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯನ್ನು 2023ರ ಆಗಸ್ಟ್ ನಿಂದ ಜಾರಿಗೆ ತಂದಿದೆ.
2025ರ ಅಕ್ಟೋಬರ್ ವೇಳೆಗೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ 2,94,399 ಮಹಿಳೆಯರು ಗುರಿ ಇದ್ದು, 2,80,673 ಮಹಿಳೆಯರು ಸೇರ್ಪಡೆಯಾಗಿ ಸಾಧನೆ ಮಾಡಲಾಗಿದೆ. ಅಂದರೆ ಶೇಕಡ 95.34 ರಷ್ಟು ಪ್ರಗತಿ ಸಾಧಿಸಲಾಗಿದೆ.ಈಗ ಜಿಲ್ಲೆಯಲ್ಲಿ ಯೋಜನೆಯಿಂದ ಕೈ ಬಿಡಲಾಗಿರುವ 4,756 ಮಹಿಳೆಯರಲ್ಲಿ ರಾಮನಗರ ಮೊದಲಿದ್ದರೆ, ಮಾಗಡಿ ಕಡೆಯ ಸ್ಥಾನದಲ್ಲಿದೆ. ರಾಮನಗರದಲ್ಲಿ 1,736 ಮಹಿಳೆಯರು, ಎರಡನೇ ಸ್ಥಾನದಲ್ಲಿರುವ ಕನಕಪುರದಲ್ಲಿ 1,236, ಮೂರನೇ ಸ್ಥಾನದಲ್ಲಿರುವ ಚನ್ನಪಟ್ಟಣದಲ್ಲಿ 1,189 ಹಾಗೂ ಕಡೆಯ ಸ್ಥಾನದಲ್ಲಿರುವ ಮಾಗಡಿಯಲ್ಲಿ 595 ಮಹಿಳೆಯರು ಗೃಹಲಕ್ಷ್ಮಿ ಹಣದಿಂದ ವಂಚಿತರಾಗಿದ್ದಾರೆ.
ಯಜಮಾನರ ಆದಾಯ ಪರಿಗಣನೆ:
ಸರ್ಕಾರವು ಯೋಜನೆಗೆ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ 4,756 ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಡಲಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ ಅನ್ನ ಯೋಜನೆ (ಎಎವೈ), ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಹಾಗೂ ಎಪಿಎಲ್ (ಬಡತನ ರೇಖೆಗಿಂತ ಮೇಲಿರುವ) ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ, ಒಬ್ಬರನ್ನು ಮಾತ್ರ ಯೋಜನೆಗೆ ಪರಿಗಣಿಸಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾದ ಮಹಿಳೆಯರ ಸಂಖ್ಯೆ
ಚನ್ನಪಟ್ಟಣ1,189
ಮಾಗಡಿ595
ರಾಮನಗರ1,736ಒಟ್ಟು4,756
ಬಾಕ್ಸ್............ಗೃಹಲಕ್ಷ್ಮಿ ಫಲಾನುಭವಿಗಳ ವಿವರ
ತಾಲೂಕುಫಲಾನುಭವಿಗಳ ಸಂಖ್ಯೆಚನ್ನಪಟ್ಟಣ64,495
ಕನಕಪುರ92,367ಮಾಗಡಿ53,200
ರಾಮನಗರ67,611ಒಟ್ಟು2,80,673
ಕೋಟ್ ..................ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪತಿಯ ಆದಾಯ ಆಧರಿಸಿ ಫಲಾನುಭವಿಗಳ ಆರ್ಥಿಕ ಸ್ಥಿತಿಗತಿ ನಿರ್ಧರಿಸಲಾಗಿದೆ. ಫಲಾನುಭವಿಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತಹವರ ಹೆಸರು ಕೈ ಬಿಡಲಾಗುತ್ತದೆ.
- ಕೆ.ರಾಜು, ಜಿಲ್ಲಾಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಬೆಂ.ದಕ್ಷಿಣ ಜಿಲ್ಲೆ16ಕೆಆರ್ ಎಂಎನ್ 3,4.ಜೆಪಿಜಿ
3.ಗೃಹಲಕ್ಷ್ಮಿ ಲೋಗೊ4.ಕೆ.ರಾಜು, ಜಿಲ್ಲಾಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಬೆಂ.ದಕ್ಷಿಣ ಜಿಲ್ಲೆ.