ದೇವರಹಿಪ್ಪರಗಿ: ತಾಲೂಕಿನ ಕದರಾಪೂರ ಗ್ರಾಮದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದ ರೈತನ ನಾಲ್ಕು ಎಕರೆ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.
ದೇವರಹಿಪ್ಪರಗಿ: ತಾಲೂಕಿನ ಕದರಾಪೂರ ಗ್ರಾಮದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದ ರೈತನ ನಾಲ್ಕು ಎಕರೆ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಗ್ರಾಮದ ರೈತ ಮೋಹನ ಜಾಪು ರಾಠೋಡ ಅವರಿಗೆ ಸೇರಿದ ಒಟ್ಟು 9 ಎಕರೆ ಜಮೀನಿನಲ್ಲಿ ನಾಲ್ಕು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆ ಬೆಳೆಯಲಾಗಿತ್ತು. ಆದರೆ ವಿದ್ಯುತ್ ಅವಘಡದಿಂದ ಉಂಟಾದ ಬೆಂಕಿ ಅನಾಹುತಕ್ಕೆ ಕಬ್ಬಿನ ಬೆಳೆ ಸಂಪೂರ್ಣ ಆಹುತಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ರೈತ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.
ಕೃಷಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಬೆಳೆದಿದ್ದ ಕಬ್ಬು ಬೆಳೆ ಕಣ್ಣೆದುರೇ ಸುಟ್ಟು ಹೋಗಿರುವುದರಿಂದ ರೈತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯನ್ನು ಸಮಗ್ರವಾಗಿ ಪರಿಶೀಲನೆ ನಡೆಸಬೇಕು. ಬೆಳೆ ಕಳೆದುಕೊಂಡ ರೈತನಿಗೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.