ನವುಲೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ

KannadaprabhaNewsNetwork |  
Published : Nov 07, 2025, 01:45 AM IST
ಪೊಟೊ: 06ಎಸ್‌ಎಂಜಿಕೆಪಿ08ಶಿವಮೊಗ್ಗದ ನವುಲೆಯ ಕೃಷಿ ವಿವಿ ಸಭಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮತ್ತು ತೋಟಗಾರಿಕೆ ಮೇಳ ಅಂಗವಾಗಿ ವಿವಿಧ ಮಳಿಗೆಗಳನ್ನು ಏರ್ಪಡಿಸಿರುವುದು.  | Kannada Prabha

ಸಾರಾಂಶ

ನವುಲೆಯ ಕೃಷಿ ವಿವಿ ಸಭಾಂಗಣದಲ್ಲಿ ನ.7ರಿಂದ 10ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ ಭರದ ಸಿದ್ದತೆ ನಡೆದಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನವುಲೆಯ ಕೃಷಿ ವಿವಿ ಸಭಾಂಗಣದಲ್ಲಿ ನ.7ರಿಂದ 10ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ ಭರದ ಸಿದ್ದತೆ ನಡೆದಿದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ಈ ಮೇಳವನ್ನು ಆಯೋಜಿಸಲಾಗಿದ್ದು, ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳ ಉತ್ಪಾದನಾ ಘಟಕಗಳು, ವಿಜ್ಞಾನಿಗಳ-ರೈತರೊಂದಿಗೆ ಸಂವಾದ ಕಾರ್ಯಕ್ರಮಗಳು ಮತ್ತು ವಿಚಾರಗೋಷ್ಠಿಗಳನ್ನೂ ಸಹ ಏರ್ಪಡಿಸಲಾಗಿದೆ.

ಈ ಮೇಳದಲ್ಲಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಸಸಿಗಳು ಮತ್ತು ತಳಿಗಳ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ ಕೃಷಿ ಮತ್ತು ತೋಟಗಾರಿಕೆ-ಅರಣ್ಯ-ಸಮಗ್ರ ಪದ್ಧತಿಗಳು ಕೃಷಿ ಮತ್ತು ತೋಟಗಾರಿಕಾ ವಸ್ತುಪ್ರದರ್ಶನ, ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಜೈವಿಕ ಪರಿಕರಗಳ ಪ್ರದರ್ಶನ, ರೈತ - ವಿಜ್ಞಾನಿ ಸಂವಾದ ಮತ್ತು ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿರುತ್ತದೆ, ಅಲ್ಲದೇ, ಸಿರಿಧಾನ್ಯಗಳ ಮೌಲ್ಯವರ್ಧನೆಗಾಗಿ ಹೆಚ್ಚು ಒತ್ತು ಕೊಟ್ಟು ರೈತರ ಮನಮುಟ್ಟಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅನೇಕ ವಿಶೇಷತೆಗಳೊಂದಿಗೆ ಆಯೋಜಿಸಲಾಗುತ್ತಿರುವ ಈ ಕೃಷಿಮೇಳದಲ್ಲಿ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಪುಷ್ಪ ಕೃಷಿ, ತಾರಸಿ ತೋಟ ಮತ್ತು ಲಂಬ ತೋಟ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ಸಿರಿಧಾನ್ಯಗಳ ಮಹತ್ವ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ. ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಮಗ್ರ ಜಲಾನಯನ ಅಭಿವೃದ್ಧಿ, ಕೃಷಿ-ತೋಟಗಾರಿಕೆ-ಅರಣ್ಯ ಸಮಗ್ರ ಪದ್ಧತಿಗಳು, ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹವಾಮಾನ ಆಧಾರಿತ ಕೃಷಿ, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಶ್ರೇಷ್ಟ- ಕೃಷಿಕರು ಮತ್ತು ಕೃಷಿಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮೇಳದಲ್ಲಿ ತಂತ್ರಜ್ಞಾನ ಉದ್ಯಾನವನವು ಆಕರ್ಷಣೆಯಾಗಿದ್ದು, ಇಲ್ಲಿ ವಿವಿಧ ಬೆಳೆಗಳ ನವೀನ ತಂತ್ರಜ್ಞಾನಗಳನ್ನು - ರೈತರಿಗೆ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಪ್ರದರ್ಶಿಸಲು ಉದ್ದೇಶಿಸಿದೆ. ಅಲ್ಲದೆ ವಿವಿಧ ಸಂಸ್ಥೆಗಳು ಅಭಿವೃದ್ಧಿಪಡಿಸಿರುವಂತಹ ನಾವೀನ್ಯತೆ ನೊಂದಿರುವ ಕೃಷಿಪರಿಕರಗಳು, ಮೌಲ್ಯವರ್ಧಿತ ಉತ್ಪನ್ನಗಳು, ಕೃಷಿ ತಂತ್ರಜ್ಞಾನಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನಗಳ ಪ್ರಯೋಜನವನ್ನು ರೈತ ಬಾಂಧವರು ಪಡೆದುಕೊಳ್ಳುವಂತೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್‌ ಮನವಿ ಮಾಡಿದ್ದಾರೆ.

ಈ ಮೇಳದ ವಿಶೇಷತೆ ಎಂದರೆ ಸಮಗ್ರ ಕೃಷಿ ಪದ್ಧತಿ, ಅಂತರ್ಜಲ ಮರುಪೂರಣ, ಹೈಟಿಕ್ ತೋಟಗಾರಿಕೆ. ಪುಷ್ಪ ಕೃಷಿ ಮತ್ತು ತಾರಸಿ ತೋಟ, ಜೇನುವನ ಮತ್ತು ಕೀಟ ಪ್ರಪಂಚ, ಪರಿಸರ ಕೃಷಿ ಪ್ರವಾಸೋದ್ಯಮ, ಸಿರಿಧಾನ್ಯಗಳ ಮೌಲ್ಯವರ್ಧನೆ ಮತ್ತು ತಾಂತ್ರಿಕತೆಗಳು, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಹಕಾರ ಕೃಷಿ, ಮೌಲ್ಯವರ್ಧನೆ ಹಾಗೂ ಮಾರಾಟದ ಚರ್ಚಾ ಗೋಷ್ಠಿಗಳು ಇತ್ಯಾದಿ ಕಾರ್ಯಕ್ರಮಗಳ ಮೂಲಕ ಆಕರ್ಷಿಸಲು ಉದ್ದೇಶಿಸಲಾಗಿದೆ.

ಸಂಘಟಿತ ಪ್ರಯತ್ನಗಳ ಫಲವಾಗಿ, ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ನೀಡುವ 25ಕ್ಕೂ ಹೆಚ್ಚು ತಳಿಗಳನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ 42 ಉತ್ಪಾದನಾ ತಂತ್ರಜ್ಞಾನಗಳು. 31 ಸಸ್ಯ ರಕ್ಷಣಾ ತಂತ್ರಜ್ಞಾನಗಳು, 25 ಕೃಷಿ ಯಾಂತ್ರೀಕರಣ, 29 ತೋಟಗಾರಿಕೆ. 5 ಆಹಾರ ವಿಜ್ಞಾನಗಳಲ್ಲಿ, ಕೊಯ್ಲೋತ್ತರ ತಂತ್ರಜ್ಞಾನ ಮತ್ತು ಒಳನಾಡು ಮೀನುಗಾರಿಕೆ ವಿಭಾಗಗಳಲ್ಲಿ ಪ್ರಗತಿಯನ್ನು ಸಾಧಿಸಲಾಗಿದೆ.

ಈ ವರ್ಷವೂ ಸಹ ಕೃಷಿ-ತೋಟಗಾರಿಕೆ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಗಣನೀಯ ಸಾಧನೆಗೈದ ಜಿಲ್ಲಾ ಮಟ್ಟದ ಪ್ರಗತಿಪರ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ವಿವಿಧ ವಿಸ್ತರಣೆ ಚಟುವಟಿಕೆಗಳ ಮೂಲಕ 4 ಲಕ್ಷ ರೈತರಿಗೆ ಈವರೆಗೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ 7 ಜಿಲ್ಲೆಗಳಲ್ಲಿ ತಾಂತ್ರಿಕ ಮಾಹಿತಿಯನ್ನು ಒದಗಿಸಲಾಗುತ್ತಿದೆ.

ಈ ಮೇಳವನ್ನು ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪಅವರು ತಾಂತ್ರಿಕ ಕೈಪಿಡಿಗಳ ಬಿಡುಗಡೆಗೊಳಿಸುವರು. ರಾಜ್ಯ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ತಂತ್ರಜ್ಞಾನ ಉದ್ಯಾನವನ ಉದ್ಘಾಟಿಸುವರು. ಶಾಸಕರಾದ ಬಿ.ಕೆ.ಸಂಗಮೇಶ್‌, ಗೋಪಾಲಕೃಷ್ಣ ಬೇಳೂರು ಅವರು ಉಪಸ್ಥಿತರಿರುವರು. ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಮತ್ತು ವಿಧಾನಸಭಾ ಕ್ಷೇತ್ರಗಳ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಪದ ಉಳಿಯಲು ಸಂಘ-ಸಂಸ್ಥೆಗಳಿಂದ ಸಾಧ್ಯ
ಪ್ರವಾಸಿಗರಿಂದ ತುಂಬಿದ ಗೋಕರ್ಣ