ಕನ್ನಡಪ್ರಭ ವಾರ್ತೆ ಮಂಗಳೂರು
ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವೆಲ್‌ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು. ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಕೂಡ ಆಗುತ್ತಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ನಡೆದಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದರೂ ಬಂಧನ ಆಗುತ್ತಿಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದರು. ರಾಜ್ಯದಿಂದ ಬಿಡಿಗಾಸು ಇಲ್ಲ: ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ನಡೆಯುತ್ತಿದೆ. ರಾಜ್ಯದಿಂದ ಒಂದು ರು. ಬಿಡಿಗಾಸು ಬಿಡಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ನಳಿನ್ ಕುಮಾರ್ ಮಾರ್ಮಿಕವಾಗಿ ಹೇಳಿದರು.ಇಂದು ರಾಜ್ಯಾಧ್ಯಕ್ಷಗೆ ಭರ್ಜರಿ ಸ್ವಾಗತ:
ನ.22ರಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅವರನ್ನು ವಿಮಾನ ನಿಲ್ದಾಣದಿಂದ ಸ್ವಾಗತಿಸುತ್ತೇವೆ. ಅಲ್ಲಿಂದ ಮೆರವಣಿಗೆ ಮೂಲಕ ಮಂಗಳೂರಿನ ಸಿ.ವಿ.ನಾಯಕ್ ಹಾಲ್‌ನಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.