41.73 ಕೋಟಿ ರು.ಮೌಲ್ಯದ ಮಾದಕ ವಸ್ತು ನಾಶ

KannadaprabhaNewsNetwork |  
Published : Jun 27, 2024, 01:34 AM ISTUpdated : Jun 27, 2024, 06:08 AM IST
DRUG 14 | Kannada Prabha

ಸಾರಾಂಶ

ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಹಾಗೂ ಬೆಂಗಳೂರು ನಗರ ಪೊಲೀಸ್‌ ಇಲಾಖೆ ಜಂಟಿಯಾಗಿ ಬುಧವಾರ ‘ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ’ ಕಾರ್ಯಕ್ರಮ ನಡೆಯಿತು.

 ಬೆಂಗಳೂರು : ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಬೆಂಗಳೂರು ಪೊಲೀಸರು ವಿವಿಧ ಪ್ರಕರಣಗಳಲ್ಲಿ ವಿಲೇವಾರಿ ಮಾಡಿದ್ದ 41.73 ಕೋಟಿ ರು ಮೌಲ್ಯದ ಡ್ರಗ್ಸ್ ಅನ್ನು ನಾಶಪಡಿಸಿದರು. ದಾಬಸ್‌ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ನಾಶಗೊಳಿಸುವ ದೃಶ್ಯವನ್ನು ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕ ಸಚಿವರು ವೀಕ್ಷಿಸಿದರು.

ಇನ್ನು, ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಹಾಗೂ ಬೆಂಗಳೂರು ನಗರ ಪೊಲೀಸ್‌ ಇಲಾಖೆ ಜಂಟಿಯಾಗಿ ಬುಧವಾರ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಡ್ರಗ್ಸ್ ಮುಕ್ತ ಕರ್ನಾಟಕ’ವಾಗಿಸುವ ನಿಟ್ಟಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ರಾಜ್ಯ ಸರ್ಕಾರ ಯುದ್ಧವನ್ನೇ ಸಾರಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಡ್ರಗ್ಸ್ ಜಾಗತಿಕ ಪೀಡುಗಾಗಿ ಪರಿಣಮಿಸಿದೆ. ಈ ವ್ಯಸನಕ್ಕೆ ಸಿಲುಕಿ ಯುವ ಸಮುದಾಯ ಭವ್ಯ ಭವಿಷ್ಯ ಹಾಳಾಗುತ್ತಿದೆ. ಮಾದಕ ವಸ್ತು ವ್ಯಸನ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕಿದೆ. ಇಂದು ದೇಶದಲ್ಲಿ ಸುಮಾರು 5 ಕೋಟಿಗೂ ಹೆಚ್ಚಿನ ಜನರು ಮಾದಕ ವಸ್ತು ವ್ಯಸನಿಗಳಿದ್ದಾರೆ ಎಂಬುದು ಆಘಾತಕಾರಿ ಸಂಗತಿಯಾಗಿದೆ. ದೇಶದ ಭವಿಷ್ಯ ದೃಷ್ಟಿಯಿಂದ ಕೂಡ ವ್ಯಸನ ಮುಕ್ತವಾಗಿಸುವ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಕರೆ ನೀಡಿದರು.

ಅಪರಾಧ ಪ್ರಕರಣಗಳಲ್ಲಿ ಅಪ್ರಾಪ್ತ ವಯಸ್ಸಿನವರ ಪಾಲ್ಗೊಳ್ಳುವಿಕೆ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರಲ್ಲಿ ಬಹುತೇಕರು ಡ್ರಗ್ಸ್ ವ್ಯಸನಿಗಳಾಗಿದ್ದಾರೆ. ಇದು ಉತ್ತಮ ಸಮಾಜಕ್ಕೆ ಮಾರಕವಾಗುವ ವಿಷಯವಾಗಿದೆ. ಡ್ರಗ್ಸ್ ಮುಕ್ತವಾಗಿಸಲು ಪೋಷಕರು ಕೂಡ ಮಕ್ಕಳ ಚಟುವಟಿಕೆ ಮೇಲೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ಹಾಗೂ ಎಡಿಜಿಪಿ ಪ್ರಣಬ್ ಮೊಹಂತಿ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

ಪ್ರಮುಖ ಡ್ರಗ್ಸ್ ನಾಶ ವಿವರ ಹೀಗಿದೆ. ಡ್ರಗ್ಸ್‌ಕೆಜಿಕೋಟಿ ರು.ಗಾಂಜಾ 1.193 ಕ್ವಿಂಟಾಲ್ 5.51

ಹ್ಯಾಶಿಶ್ ಆಯಿಲ್‌ 7 ಕೆಜಿ 1.17

ಎಂಡಿಎಂಎ20.632 ಕೆಜ 20.86

ಕೊಕೇನ್‌1.8466.67

ಇ ಸಿಗರೇಟ್‌5,850 (ಕೆಜಿ ಅಲ್ಲ)3 ಕೋಟಿ

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ