ರಾಮನಗರ: ಜಿಲ್ಲೆಯಲ್ಲಿ ಮತ್ತೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 2 ವರ್ಷಗಳಲ್ಲಿ 42 ಬಾಲ್ಯ ವಿವಾಹಗಳು ನಡೆದಿದ್ದರೆ, 259 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ವರ್ಷ (2022 - 23 ಹಾಗೂ 2023-24) ಗಳಲ್ಲಿ ಒಟ್ಟು 139 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 97 ಮದುವೆಗಳನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಆ 1 ಪ್ರಕರಣದಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
259 ಪೋಕ್ಸೋ ಪ್ರಕರಣ ದಾಖಲು :2022 - 23ರಲ್ಲಿ 91 ಪ್ರಕರಣ ದಾಖಲಾಗಿದ್ದು, ಇದರಲ್ಲಿ 5 ಪ್ರಕರಣಗಳು ವರ್ಗಾವಣೆಗೊಂಡಿದ್ದರೆ, 22 ಪ್ರಕರಣಗಳು ಇತ್ಯರ್ಥಗೊಂಡಿವೆ. 2023-24ರಲ್ಲಿ ದಾಖಲಾದ 121 ಪ್ರಕರಣಗಲ್ಲಿ 10 ಕೇಸಗಳು ಇತ್ಯರ್ಥಗೊಂಡಿದ್ದರೆ 8 ಪ್ರಕರಣಗಳು ವರ್ಗಾವಣೆಗೊಂಡಿವೆ. ಇನ್ನು 2024-25ನೇ ಸಾಲಿನಲ್ಲಿ 47 ಪ್ರಕರಣ ದಾಖಲಾಗಿದ್ದು, 1 ಪ್ರಕರಣ ವರ್ಗಾವಣೆಗೊಂಡಿದೆ.
ಮಹಾಮಾರಿ ಕೊರೋನಾ ಸಮಯದಲ್ಲಿ ಬಾಲ್ಯ ವಿವಾಹಗಳ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಅರಿವಿನ ಕೊರತೆ, ಅನಕ್ಷರತೆ, ಮೂಢ ನಂಬಿಕೆ, ಬಡತನದಿಂದಾಗಿ ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಿಕೊಡುತ್ತಿದ್ದರು. ಅದರಲ್ಲೂ ಕೊರೋನಾ ಸಮಯದಲ್ಲಿ ಕಿತ್ತು ತಿನ್ನುವ ಬಡತನದಿಂದ ಬೇಸತ್ತ ಪೋಷಕರು ತಮ್ಮ ಆಟ ಆಡುವ ವಯಸ್ಸಿನ ಮಗಳನ್ನು ಮದುವೆ ಮಾಡಿಕೊಟ್ಟ ಆಕೆಯ ಜವಾಬ್ದಾರಿಯಿಂದ ಕೈ ತೊಳೆದುಕೊಳ್ಳುತ್ತಿದ್ದರು. ಕೊರೋನಾ ಆರಂಭವಾದ ಬಳಿಕ ಎರಡು ವರ್ಷದಲ್ಲಿ ಸುಮಾರು 114 ಪ್ರಕರಣಗಳು ಬಯಲಾಗಿದ್ದವು.
ದೂರವಾಣಿ ಕರೆ ಮಾಡಿ :
ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ್ಯವಿವಾಹ ನಡೆಯುತ್ತಿದ್ದರೆ ಸಾರ್ವಜನಿರು ನಿರ್ಭೀತಿಯಿಂದ ಮಾಹಿತಿ ನೀಡಬೇಕು. ಮಾಹಿತಿದಾರರ ವಿವರಗಳನ್ನು ಗೋಪ್ಯವಾಗಿ ಇಡಬಹುದು. ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಗಟ್ಟುವಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರತಿಕ್ರಿಯಿಸಿದರು.
2 ತಿಂಗಳಿಗೊಂದು ನಿಷೇಧಾಧಿಕಾರಿಗಳ ತಂಡ:
ಏಪ್ರಿಲ್ -ಮೇ ತಿಂಗಳಲ್ಲಿ ತಹಸೀಲ್ದಾರ್, ಸಿಡಿಪಿಐ, ಜೂನ್ - ಜುಲೈನಲ್ಲಿ ತಾಪಂ ಇಒ, ಸಿಡಿಪಿಒ, ಆಗಸ್ಟ್ - ಸೆಪ್ಟೆಂಬರ್‌ನಲ್ಲಿ ಬಿಇಒ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಂರಕ್ಷಣಾಧಿಕಾರಿ, ಅಕ್ಟೋಬರ್ - ನವೆಂಬರ್‌ನಲ್ಲಿ ತಾಲೂಕು ವೈದ್ಯಾಧಿಕಾರಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ವಿಸ್ತರಣಾಧಿಕಾರಿ, ಡಿಸೆಂಬರ್ - ಜನವರಿಯಲ್ಲಿ ವೃತ್ತ ನಿರೀಕ್ಷಕ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಂರಕ್ಷಣಾಧಿಕಾರಿ ಹಾಗೂ ಫೆಬ್ರವರಿ - ಮಾರ್ಚ್‌ನಲ್ಲಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ, ಕಾರ್ಮಿಕಾಧಿಕಾರಿಗಳು ತಂಡ ಬಾಲ್ಯ ವಿವಾಹ ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ.(ಯಾವುದಾದರೂ ಒಂದು ಬಾಲ್ಯ ವಿವಾಹದ ಫೋಟೋ ಬಳಸಬಹುದಾ)