ಶಾಸ್ತ್ರೋಕ್ತವಾಗಿ ನೆರವೇರಿದ 45ನೇ ವರ್ಷದ ಗಣೇಶೋತ್ಸವ ವಿಸರ್ಜನೆ

KannadaprabhaNewsNetwork |  
Published : Oct 07, 2026, 01:30 AM IST
 ಶಾಸ್ತ್ರೋಕ್ತವಾಗಿ ನೆರವೇರಿದ 45ನೇ ವರ್ಷದ ಗಣೇಶೋತ್ಸವ ವಿಸರ್ಜನೆ | Kannada Prabha

ಸಾರಾಂಶ

ನಗರದ ಗ್ರಾಮ ದೇವತೆಗಳಾದ ಕರಿಯಮ್ಮ ಹಾಗೂ ಮಲ್ಲಿಗೆಮ್ಮ ದೇವಿಯರ ಸಮೇತ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಂಜೆ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಅರಸೀಕೆರೆ: ನಗರದ ಶಾನುಭೋಗರ ಬೀದಿಯಲ್ಲಿ ವಿನಾಯಕ ಭಕ್ತ ಮಂಡಳಿ ಹಾಗೂ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ 45ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣಪತಿ ವಿಗ್ರಹದ ವಿಸರ್ಜನಾ ಮಹೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದೊಂದಿಗೆ ನೆರವೇರಿತು. ಗಣೇಶೋತ್ಸವದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಗಣಪತಿ ಹಾಗೂ ನವಗ್ರಹ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಗ್ರಾಮ ದೇವತೆಗಳಾದ ಕರಿಯಮ್ಮ ಹಾಗೂ ಮಲ್ಲಿಗೆಮ್ಮ ದೇವಿಯರ ಸಮೇತ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಂಜೆ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಭಕ್ತರು ಗಣಪತಿ ವಿಗ್ರಹದ ದರ್ಶನ ಪಡೆದು ಭಕ್ತಿಭಾವ ಮೆರೆದರು. ಬಳಿಕ ಕಂತೇನಹಳ್ಳಿ ಕೆರೆಯಲ್ಲಿ ಸಂಪ್ರದಾಯಬದ್ಧವಾಗಿ ಹಾಗೂ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಗಣಪತಿ ವಿಗ್ರಹದ ವಿಸರ್ಜನೆ ನೆರವೇರಿಸಲಾಯಿತು. ಮೆರವಣಿಗೆಯಲ್ಲಿ ವಿನಾಯಕ ಭಕ್ತ ಮಂಡಳಿ ಹಾಗೂ ಗೆಳೆಯರ ಬಳಗದ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಕಾಂಗ್ರೆಸ್ ದೂರು
ಶಿಥಿಲ, ಹಳೇ ಪಶು ವೈದ್ಯಕೀಯ ಆಸ್ಪತ್ರೆಗಳ ಪಟ್ಟಿ ನೀಡಿ: ಶಾಂತನಗೌಡ