ದೇವರಹಿಪ್ಪರಗಿ: ಪಟ್ಟಣದ ಆರಾಧ್ಯ ದೈವ ಕಲ್ಮೇಶ್ವರ ದೇವರ ಜಾತ್ರಾ ಮಹೋತ್ಸವ 4ನೇ ಸೋಮವಾರ ಸಡಗರ-ಸಂಭ್ರಮದಿಂದ ನಡೆಯಲಿದೆ ಎಂದು ಕಲ್ಮೇಶ್ವರ ದೇವಸ್ಥಾನದ ಮುಖ್ಯ ಅರ್ಚಕರಾದ ಜಗದೇವಪ್ಪ ಕೋಟಿನ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರತಿ ವರ್ಷದಂತೆ ಶ್ರಾವಣ ಮಾಸದಂದು ನಡೆಯಲಿರುವ ಐತಿಹಾಸಿಕ ಕಲ್ಮೇಶ್ವರ (ರಾಮತೀರ್ಥ) ಜಾತ್ರಾ ಮಹೋತ್ಸವ ಆ.26 ರಂದು ಕಲ್ಮೇಶ್ವರ ದೇವಸ್ಥಾನದಿಂದ ಸಕಲ ವಾದ್ಯಮೇಳಗಳೊಂದಿಗೆ ಪಲ್ಲಕ್ಕಿ ಮಹೋತ್ಸವ ರಾಮತೀರ್ಥದವರೆಗೆ ಭಕ್ತರು ಭಾಗವಹಿಸುವ ಮೂಲಕ ಅಂದು ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಅಂದು ರಾಮತೀರ್ಥ ಜಾತ್ರಾ ಮಹೋತ್ಸವದಲ್ಲಿ ಸುಮಾರು 7 ಗ್ರಾಮಗಳ ಪಲ್ಲಕ್ಕಿ ಉತ್ಸವ ಸಡಗರ ಸಂಭ್ರಮದಿಂದ ನಡೆಯಲಿದೆ ನಂತರ ಸಂಜೆ ಹೊತ್ತು ಮರಳಿ ಕಲ್ಮೇಶ್ವರ ದೇವಸ್ಥಾನಕ್ಕೆ ಪಾಲಕಿ ಬರುವ ಮೂಲಕ ಜಾತ್ರೆ ಸಂಪನ್ನಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಜಾತ್ರಾ ಕಾರ್ಯಕ್ರಮಗಳ ವಿವರ: ಜಾತ್ರಾ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಹಾಗೂ ಈ ಬಾರಿ ಗೆಳೆಯರ ಬಳಗದ ವತಿಯಿಂದ ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆ ನಡೆಯಲಿದೆ.
-ವೀರೇಶ ಕುದುರಿ, ಯುವ ಮುಖಂಡರು.