ಅರಣ್ಯ ಪ್ರದೇಶಗಳ ವಿಸ್ತರಣೆ, ಭೂಮಿಯ ಫಲವತ್ತತೆ ಹೆಚ್ಚಳ, ಮಳೆ ಪ್ರಮಾಣ ಸುಧಾರಣೆ ಹಾಗೂ ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಸಂಸ್ಥೆ ವತಿಯಿಂದ ತಾಲೂಕಿನ ರೈತರಿಗೆ ಉಚಿತವಾಗಿ 5 ಸಾವಿರ ಸಸಿಗಳನ್ನು ವಿತರಿಸಲಾಗಿದೆ.
ಮದ್ದೂರು: ಪರಿಸರ ಸಂರಕ್ಷಣೆ ಹಾಗೂ ರೈತರ ಆರ್ಥಿಕಾಭಿವೃದ್ಧಿಗೆ ಉತ್ತೇಜನ ನೀಡಲು ಉಚಿತವಾಗಿ 5 ಸಾವಿರ ಸಸಿಗಳನ್ನು ವಿತರಿಸಲಾಗಿದೆ ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಕದಲೂರು ಲೋಕೇಶ್ ಹೇಳಿದರು. ನಗರದ ರೋಟರಿ ಸಂಸ್ಥೆ ಆವರಣದಲ್ಲಿ ರೈತರಿಗೆ ತುರಬೇವು ಸಸಿಗಳನ್ನು ವಿತರಿಸಿ ಮಾತನಾಡಿ, ಅರಣ್ಯ ಪ್ರದೇಶಗಳ ವಿಸ್ತರಣೆ, ಭೂಮಿಯ ಫಲವತ್ತತೆ ಹೆಚ್ಚಳ, ಮಳೆ ಪ್ರಮಾಣ ಸುಧಾರಣೆ ಹಾಗೂ ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಸಂಸ್ಥೆ ವತಿಯಿಂದ ತಾಲೂಕಿನ ರೈತರಿಗೆ ಉಚಿತವಾಗಿ 5 ಸಾವಿರ ಸಸಿಗಳನ್ನು ವಿತರಿಸಲಾಗಿದೆ ಎಂದರು.
ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಸಿ ನೆಡಲು ಅತ್ಯುತ್ತಮ ಸಮಯವಾಗಿದೆ. ರೈತರು ಕೃಷಿ ಜಮೀನಿನ ಬದುವಿನಲ್ಲಿ ಹಾಗೂ ಖಾಲಿ ಜಾಗಗಳಲ್ಲಿ ಸಸಿ ನೆಡುವುದರಿಂದ ಭವಿಷ್ಯದಲ್ಲಿ ಹೆಚ್ಚುವರಿ ಆದಾಯ ಗಳಿಸಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಗವಿಯಪ್ಪ, ಕಾರ್ಯದರ್ಶಿ ಪ್ರವೀಣ್, ಮಾಜಿ ಅಧ್ಯಕ್ಷರಾದ ಹೋನ್ನೇಗೌಡ, ಕುಮಾರ್, ಪ್ರಕಾಶ್, ವೆಂಕಟೇಶ್, ಸದಸ್ಯರಾದ, ವಿಜಯ್, ಮಂಜು, ಅಭಿಷೇಕ್, ಕೃಷ್ಣ, ಮೋಹನ್,ರವಿ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.