ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸೂಡಾ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲ ಆಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಸೂಡಾ ಪರಿಷ್ಕೃತ ಮಹಾಯೋಜನೆ (ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಪ್ರಾಧಿಕಾರದ ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು ಅಂದಾಜು ₹35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ, ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು ಎಂದರು.
ಖಾಸಗಿ ಲೇಔಟ್‍ಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಿಂದ ಈಗಾಗಲೇ ಮೂಲೆ/ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದರು.
- - -
- - - -2ಎಸ್‌ಎಂಜಿಕೆಪಿ02: ಎಚ್.ಎಸ್.ಸುಂದರೇಶ್