ಇಂದಿನ ಸ್ವಾಭಿಮಾನಿ ಸಮಾವೇಶಕ್ಕೆ ಕೊಡಗಿನಿಂದ 5-8 ಸಾವಿರ ಮಂದಿ: ರಮೇಶ್‌

KannadaprabhaNewsNetwork |  
Published : Dec 05, 2024, 12:31 AM IST
32 | Kannada Prabha

ಸಾರಾಂಶ

ಹಾಸನದಲ್ಲಿ ಇಂದು ನಡೆಯುವ ಸ್ವಾಭಿಮಾನಿ ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೆ ಪೂರಕವಾಗಿ ಕೊಡಗಿನಿಂದ 50 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಮಟ್ಟ ಮತ್ತು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಪಟ್ಟಣ ಪ್ರದೇಶಗಳಿಂದ ಹೆಚ್ಚಿನ ಬಸ್ ಗಳು ತೆರಳಲಿವೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಹಾಸನದಲ್ಲಿ ಗುರುವಾರ ಆಯೋಜಿತವಾಗಿರುವ ‘ಸ್ವಾಭಿಮಾನಿ’ ಸಮಾವೇಶಕ್ಕೆ ಕೊಡಗಿನಿಂದ 5 ರಿಂದ 8 ಸಾವಿರ ಮಂದಿ ತೆರಳುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೆ ಪೂರಕವಾಗಿ ಕೊಡಗಿನಿಂದ 50 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಮಟ್ಟ ಮತ್ತು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಪಟ್ಟಣ ಪ್ರದೇಶಗಳಿಂದ ಹೆಚ್ಚಿನ ಬಸ್ ಗಳು ತೆರಳಲಿವೆ ಎಂದರು. ಭಾವನೆಗಳ ಮೇಲೆ ಬಿಜೆಪಿ ರಾಜಕಾರಣ: ಜನರ ಭಾವನೆಗಳ ಮೇಲೆ ಬಿಜೆಪಿ ರಾಜಕಾರಣ

ಮಾಡುತ್ತಿದ್ದರೆ, ಕಾಂಗ್ರೆಸ್ ಪಕ್ಷ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರ ಬದುಕನ್ನು ಸುಧಾರಿಸಿದೆ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜಕಾರಣವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿದೆ ಎಂದರು.

ಸ್ವಾಭಿಮಾನಿ ಸಮಾವೇಶಕ್ಕೆ ಸಮಾನತೆ ಮೇಲೆ ನಂಬಿಕೆಯನ್ನು ಹೊಂದಿರುವ, ಸಂವಿಧಾನ ಗೌರವಿಸುವ ಸಾಕಷ್ಟು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸಮಾವೇಶದಲ್ಲಿ ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್ ಹಾಗೂ ಮೂಡ ಮಾಜಿ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ