ಪುತ್ತೂರಿನಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಮಂಜೂರಾತಿ ನೀಡಿ ಅಗತ್ಯ ಮೂಲಸೌಕರ್ಯ ಹಾಗೂ ಮಾನವ ಸಂಪನ್ಮೂಲ ಒದಗಿಸಿಕೊಡುವಂತೆ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಪುತ್ತೂರು: ಪುತ್ತೂರಿನಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಮಂಜೂರಾತಿ ನೀಡಿ ಅಗತ್ಯ ಮೂಲಸೌಕರ್ಯ ಹಾಗೂ ಮಾನವ ಸಂಪನ್ಮೂಲ ಒದಗಿಸಿಕೊಡುವಂತೆ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕರು, ಪುತ್ತೂರು ತಾಲೂಕಿನ ಬನ್ನೂರಲ್ಲಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾಪವನ್ನು ಸಲ್ಲಿಸಲಾಗಿದೆ. ಗ್ರಾಮದ ಕುಂಟ್ಯಾನ ಎಂಬಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ೫.೦೦ ಎಕರೆ ಜಮೀನನ್ನು ಆಯುಷ್ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶದಿಂದ ದ ಕ ಜಿಲ್ಲಾ ಆಯುಷ್ ಇಲಾಖೆ ಹೆಸರಲ್ಲಿ ಕಾಯ್ದಿರಿಸಲು ಸೂಚಿಸಲಾಗಿದೆ ಎಂದರು.ಜಿಲ್ಲಾಧಿಕಾರಿ ಆದೇಶದಂತೆ ತಹಸೀಲ್ದಾರರು ಬನ್ನೂರು ಗ್ರಾಮದ ಸರ್ವೆ ನಂ.೮೪/ರಲ್ಲಿ ೫.೦೦ ಎಕರೆ ಜಮೀನನ್ನು ಆಯುಷ್ ಆಸ್ಪತ್ರೆ ನಿರ್ಮಾಣದ ಉದ್ದೇಶದಿಂದ ಆಯುಷ್ ಇಲಾಖೆ ಹೆಸರಿಗೆ ಕಾಯ್ದಿರಿಸಿದ್ದು, ಇದರ ಆರ್.ಟಿ.ಸಿ. ಆಯುಷ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ನಿಗದಿತ ಜಾಗದಲ್ಲಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕಾಗಿ ಮಂಜೂರಾತಿ ನೀಡಿ ಅಗತ್ಯ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಒದಗಿಸಿಕೊಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ ಎಂದರು.ಸರ್ಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೇದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುತ್ತದೆ. ೧೦೦ ಬೆಡ್‌ಗಳ ಆಯುರ್ ಆಸ್ಪತ್ರೆ ನಿರ್ಮಾಣವಾಗಲು ಸರ್ಕಾರದಿಂದ ಮಂಜೂರಾತಿ ದೊರೆಯಬೇಕಿದ್ದು ಈ ಬಗ್ಗೆ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಸಚಿವಾಲಯದ ಪ್ರಮುಖ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಸರ್ಕಾರದಿಂದ ಶೀಘ್ರ ಮಂಜೂರಾತಿ ಸಿಗುವ ಭರವಸೆ ಇದೆ. -ಅಶೋಕ್ ರೈ ಪುತ್ತೂರು ಶಾಸಕ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.