ಕೆಫೆ ಬಾಂಬ್‌ ಕೇಸ್‌ನಲ್ಲಿ 5 ಮಂದಿ ಅರೆಸ್ಟ್‌: ಸಿಎಂ

KannadaprabhaNewsNetwork |  
Published : Mar 06, 2024, 02:17 AM ISTUpdated : Mar 06, 2024, 08:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ | Kannada Prabha

ಸಾರಾಂಶ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬನವಾಸಿ (ಶಿರಸಿ)

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕದಂಬೋತ್ಸವಕ್ಕೆ ಚಾಲನೆ ನೀಡಲು ಮಂಗಳವಾರ ಬನವಾಸಿಗೆ ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಸಿಸಿಬಿ, ಪೊಲೀಸರು ಹಾಗೂ ಎನ್‌ಐಎನವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. 

ತನಿಖೆ ಚುರುಕಾಗಿ ನಡೆಯುತ್ತಿದೆ. ಐವರ ಬಂಧನವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟಕ್ಕೆ ಸಂಬಂಧಿಸಿ ಕೆಲವು ಸುಳಿವುಗಳು ಕೂಡಾ ಸಿಕ್ಕಿವೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ನನಗೆ ಇಲ್ಲ ಎಂದರು.

ವಿಧಾನಸಭೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಪ್ರಕರಣ ಕುರಿತು ಪ್ರಶ್ನಿಸಿದಾಗ, ಬಿಜೆಪಿ ಅಧಿಕಾರಾವಧಿಯಲ್ಲಿ ಮಂಡ್ಯದಲ್ಲಿ ಅವರ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರು. 

ಹಾಗಿದ್ದರೆ ಅವರನ್ನು ಏಕೆ ಬಂಧಿಸಿರಲಿಲ್ಲ? ಆ ಪ್ರಕರಣವನ್ನು ವಜಾ ಮಾಡಿದ್ದರು. ಅಂದಾಗ ಯಾರು ದೇಶದ್ರೋಹಿಗಳು? ಆದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ನಾವು ಬಂಧಿಸಿದ್ದೇವೆ ಎಂದು ಹೇಳಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ