ಬಸವಾದಿ ಶರಣರ ಕೃತಿಗಳಿಗೆ ₹5 ಕೋಟಿ ದೇಣಿಗೆ: ಎಂಬಿಪಾ

KannadaprabhaNewsNetwork |  
Published : Nov 18, 2025, 12:45 AM IST
Ramanashri Award 3 | Kannada Prabha

ಸಾರಾಂಶ

ಸಾಂಸ್ಕೃತಿಕ ನಾಯಕ ಬಸವಣ್ಣ ಸೇರಿ ಶರಣರು, ಅನುಭವ ಮಂಟಪದ ಚಿಂತನೆಗಳ ಬಗ್ಗೆ ಜಾಗತಿಕ ಮಟ್ಟದ ಕೃತಿ ಹೊರ ತರಲು 5 ಕೋಟಿ ರು. ದೇಣಿಗೆ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಾಂಸ್ಕೃತಿಕ ನಾಯಕ ಬಸವಣ್ಣ ಸೇರಿ ಶರಣರು, ಅನುಭವ ಮಂಟಪದ ಚಿಂತನೆಗಳ ಬಗ್ಗೆ ಜಾಗತಿಕ ಮಟ್ಟದ ಕೃತಿ ಹೊರ ತರಲು 5 ಕೋಟಿ ರು. ದೇಣಿಗೆ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ಭರವಸೆ ನೀಡಿದರು.

ರೆಸಿಡೆನ್ಸಿ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಮತ್ತು ರಮಣಶ್ರೀ ಪ್ರತಿಷ್ಠಾನದಿಂದ ಆಯೋಜಿಸಿದ್ದ ‘ರಮಣಶ್ರೀ ಶರಣ ಪ್ರಶಸ್ತಿ’ ಪ್ರದಾನ, ಅಂಕಣಕಾರ ಎಸ್‌.ಷಡಕ್ಷರಿ ಅವರ ಕ್ಷಣ ಹೊತ್ತು-ಆಣಿ ಮುತ್ತು ಭಾಗ-15 ರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಬಸವಾದಿ ಶರಣರು ಮತ್ತು ಅನುಭವ ಮಂಟಪದಲ್ಲಿನ ಚಿಂತನೆಗಳನ್ನು ಕುರಿತು ಆರು ಭಾಷೆಗಳಲ್ಲಿ ಜಾಗತಿಕ ಮಟ್ಟದ ಕೃತಿ ಹೊರತರಬೇಕು. ಇದಕ್ಕಾಗಿ 5 ಕೋಟಿ ರು. ದೇಣಿಗೆ ನೀಡಲಾಗುವುದು. ಅಗತ್ಯವಾದರೆ ಇನ್ನೂ 5 ಕೋಟಿ ರು. ನೀಡಲು ತಾವು ಸಿದ್ಧ. ಇದರಲ್ಲಿ ಯಾವುದೇ ರಾಜಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಫ.ಗು.ಹಳಕಟ್ಟಿ ಅವರು ಇಲ್ಲದೆ ಹೋಗಿದ್ದರೆ ಬಸವ ಧರ್ಮವಾಗಲಿ, ವಚನ ಸಾಹಿತ್ಯವಾಗಲಿ, ನೂರಾರು ವಚನಕಾರರಾಗಲಿ ಬೆಳಕಿಗೆ ಬರುತ್ತಿರಲಿಲ್ಲ. ಹಳಕಟ್ಟಿ ಅವರು ಆರಂಭಿಸಿದ್ದ ‘ಶಿವಾನುಭವ’ ಪತ್ರಿಕೆಯನ್ನು ಶೀಘ್ರದಲ್ಲೇ ಪುನಾರಂಭಿಸಲಾಗುವುದು ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಷಡಕ್ಷರಿ ಅವರ ಜನ್ಮದಿನವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಸಿ.ಸೋಮಶೇಖರ್‌ ಮತ್ತಿತರರು ಹಾಜರಿದ್ದರು.

ಕೋಟ್‌....

ಷಡಕ್ಷರಿ ಅವರ ಸಮಾಜಮುಖಿ ಕಾರ್ಯಗಳು ಶ್ಲಾಘನೀಯ. ಕ್ಷಣ ಹೊತ್ತು-ಆಣಿ ಮುತ್ತು ಕೃತಿಯನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡಬೇಕು. ಷಡಕ್ಷರಿ ನೂರು ವರ್ಷ ಬಾಳಲಿ.

- ವಿ.ಸೋಮಣ್ಣ, ಕೇಂದ್ರ ಸಚಿವ

ಬಾಕ್ಸ್‌....

ಪ್ರಶಸ್ತಿ ಪ್ರದಾನ

ರಮಣಶ್ರೀ ಶರಣ ಜೀವಮಾನ ಸಾಧನೆ ಪ್ರಶಸ್ತಿಗೆ ಡಾ.ಜಯ ರಾಜಶೇಖರ ಹಾಗೂ ವಿವಿಧ ವಿಭಾಗದಲ್ಲಿ ಡಾ.ವಿಜಯಶ್ರೀ ಸಬರದ, ಪ್ರೊ.ಎಚ್‌.ಲಿಂಗಪ್ಪ, ಡಾ.ಜಯದೇವಿ ಜಂಗಮಶೆಟ್ಟಿ, ರಾಜು ಎಮ್ಮಿಗನೂರು, ಎಂ.ಬಿ.ಸಂತೋಷ್‌ ಮತ್ತಿತರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

PREV

Recommended Stories

150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಂಡರೆ ದೇಶದ ಅಭಿವೃದ್ಧಿಗೆ ಪೂರಕ: ಎಂ.ಜೆ.ದಿನೇಶ್