ಖಾಸಗಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ₹5 ಕೋಟಿ

KannadaprabhaNewsNetwork | Updated : Oct 28 2024, 01:01 AM IST

ಸಾರಾಂಶ

ಖಾಸಗಿ ಬಸ್ ನಿಲ್ದಾಣವನ್ನು ನೋಡಿದರೆ ಅದೋಗತಿ ಮತ್ತು ಅವ್ಯವಸ್ಥೆಯಿಂದ ಕೂಡಿದೆ. ನಿಲ್ದಾಣದಲ್ಲಿ ಇರುವಂತಹ ಕಟ್ಟಡಗಳನ್ನು ನೆಲಸಮ ಮಾಡಿ ಪುನರ್ ನಿರ್ಮಾಣ ಮಾಡಬೇಕಾಗಿದೆ. ಈ ಬಗ್ಗೆ ಶಾಸಕರು ಸರ್ಕಾರದ ಜತೆ ಚರ್ಚಿಸಿದ್ದು, ಸುಮಾರು 5 ಕೋಟಿ ರುಪಾಯಿ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ನಗರದ ನಗರಸಭೆ ಕಚೇರಿ ಮುಂಭಾಗದಲ್ಲಿ ಇರುವ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಇಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ನಿಲ್ದಾಣದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಇದೇ ವೇಳೆ ಶಾಸಕ ಕೆ ಎಚ್ ಪುಟ್ಟಸ್ವಾಮಿಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಇಂದು ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿದ್ದಾಗಿ ತಿಳಿಸಿದರು. ನೂತನ ಖಾಸಗಿ ಬಸ್‌ ನಿಲ್ದಾಣ

ಖಾಸಗಿ ಬಸ್ ನಿಲ್ದಾಣವನ್ನು ನೋಡಿದರೆ ಅದೋಗತಿ ಮತ್ತು ಅವ್ಯವಸ್ಥೆಯಿಂದ ಕೂಡಿದೆ. ನಿಲ್ದಾಣದಲ್ಲಿ ಇರುವಂತಹ ಕಟ್ಟಡಗಳನ್ನು ನೆಲಸಮ ಮಾಡಿ ಪುನರ್ ನಿರ್ಮಾಣ ಮಾಡಬೇಕಾಗಿದೆ. ಇದಕ್ಕೆ ಬೇಕಾದಂತಹ ಹಣಕಾಸು ವಿಚಾರವನ್ನು ಸರ್ಕಾರದ ಜೊತೆ ಈಗಾಗಲೇ ಮಾತಾಡಿದ್ದೇನೆ. ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಿಸಿ ಸುಮಾರು 5 ಕೋಟಿ ರುಪಾಯಿ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ ಈಗಿನ ಖಾಸಗಿ ಬಸ್ ನಿಲ್ದಾಣ ಜಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಜಾಗ ಹೋಗುತ್ತದೆ. ಹಾಗಾಗಿ ಈ ನಿಲ್ದಾಣದಲ್ಲಿ ಇರುವಂತಹ ಕಟ್ಟಡಗಳನ್ನು ತೆರವುಗೊಳಿಸಿ ಅಲ್ಲಿಗೆ ಸುಸರ್ಜಿತವಾದ ಬಸ್ ನಿಲ್ದಾಣವನ್ನು ಕಲ್ಪಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟು ಅದರ ಹಿಂಭಾಗದಲ್ಲಿ ಕಟ್ಟಡಗಳನ್ನು ಕಟ್ಟಲಾಗುತ್ತದೆ. ಇದಾದ ನಂತರ ಮುಂದಿನ ದಿನಗಳಲ್ಲಿ ಸರ್ಕಾರಿ ಬಸ್ ನಿಲ್ದಾಣಕ್ಕೂ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು ಈ ವೇಳೆ ನಗರಸಭೆ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷರಾದ ಫರೀದ್,ಆಯುಕ್ತರದ ಡಿ ಎಂ ಗೀತಾ, ನಗರಾಭಿವೃದ್ಧಿ ಇಲಾಖೆಯ ಅನ್ನಾ, ಸದಸ್ಯರಾದ ಮಂಜುಳಾ, ರಾಜಕುಮಾರ್, ನಗರಸಭೆ ಮಾಜಿ ಸದಸ್ಯ ಡಿಜೆ ಚಂದ್ರಮೋಹನ್, ಡಿಪೋ ವ್ಯವಸ್ಥಾಪಕರಾದ ರವಿಕುಮಾರ್, ಮುಂತಾದವರು ಉಪಸ್ಥಿತರಿದ್ದರು.

ಗೌರಿಬಿದನೂರು ನಗರ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕ ಪುಟ್ಟಸ್ವಾಮಿಗೌಡ ಅ‍ವರು ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದರು.

Share this article