ಕಾಮಸಮುದ್ರ ಗ್ರಾಪಂ ಅಭಿವೃದ್ಧಿಗೆ ₹5 ಕೋಟಿ

KannadaprabhaNewsNetwork |  
Published : Dec 15, 2025, 02:30 AM IST
14ಕೆಬಿಪಿಟಿ.1.ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪಂಃ ಭೀಮಾ ಸಭಾಂಗಣ ಉದ್ಘಾಟನೆ ಸಮಾರಂಭದಲ್ಲಿ ಕಾರ್ಯಕರ್ತರು ಶಾಸಕ ನಾರಾಯಣಸ್ವಾಮಿರನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗುವುದು. ವಟ್ಟಿಗಲು ,ನರಿನತ್ತ, ಯಳಚಮಂದೆ, ಗೊಲ್ಲಹಳ್ಳಿ , ವೆಂಕಟಪುರ ಹಾಗೂ ಎಲ್ಲಾ ಗ್ರಾಮಗಳಿಗೆ ಸಂಪರ್ಕ ರಸ್ತೆಗಳ ನಿರ್ಮಾಣ,ಸಿಸಿ ರಸ್ತೆಗಳ ನಿರ್ಮಾಣ, ಸೇತುವೆಗಳ ನಿರ್ಮಾಣ ಮಾಡಲಾಗುವುದು

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಕಾಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಐದು ಕೋಟಿ ರುಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಹೇಳಿದರು.ತಾಲೂಕಿನ ಕಾಮಸಮುದ್ರ ಗ್ರಾಮ ಪಂಚಾಯಿತಿಯ ನೂತನ ಎನ್ ಆರ್‌ಎಲ್‌ಎಂ ಕೇಂದ್ರ ಮತ್ತು ಗ್ರಾಪಂ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ, ಕಾಮಸಮುದ್ರ ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗುವುದು ಎಂದರು.

ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ

ಅಲ್ಲದೆ ವಟ್ಟಿಗಲು ,ನರಿನತ್ತ, ಯಳಚಮಂದೆ, ಗೊಲ್ಲಹಳ್ಳಿ , ವೆಂಕಟಪುರ ಹಾಗೂ ಎಲ್ಲಾ ಗ್ರಾಮಗಳಿಗೆ ಸಂಪರ್ಕ ರಸ್ತೆಗಳ ನಿರ್ಮಾಣ,ಸಿಸಿ ರಸ್ತೆಗಳ ನಿರ್ಮಾಣ, ಸೇತುವೆಗಳ ನಿರ್ಮಾಣ ಕಾಮಗಾರಿಗಳನ್ನು ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆಯನ್ನು ನೀಡಲಾಗಿದೆ. ಮಲ್ಲೇಶ್ ಪಾಳ್ಯ ಗ್ರಾಮಕ್ಕೆ ರಸ್ತೆಯನ್ನು ಅಭಿವೃದ್ಧಿ ಮಾಡಲು ಒಂದು ಕೋಟಿ ರುಪಾಯಿಗಳನ್ನು ಮಂಜೂರು ಮಾಡಿದ್ದು ಅತಿಶೀಘ್ರದಲ್ಲೇ ರಸ್ತೆಯನ್ನು ನಿರ್ಮಾಣ ಮಾಡುವುದಾಗಿ ತಿಳಿಸಿದರು

ಬಿಜೆಪಿ ಸೇರಿ ತಪ್ಪು ಮಾಡಿದೆ

ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಮಾತನಾಡಿ, ತಾವು ಬಿಜೆಪಿ ಸೇರಿ ತಪ್ಪು ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರಲಿಲ್ಲ, ಬಲವಂತವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಒಡತ್ತವನ್ನು ಹಾಕಿ ಚುನಾವಣೆಯಲ್ಲಿ ಸ್ಪರ್ಧಿಸದ ಮೇಲೆ ಬಿಜೆಪಿಯ ಇಬ್ಬರು ಪ್ರಭಾವಿ ವ್ಯಕ್ತಿಗಳು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿಸಿ ಕುತಂತ್ರದಿಂದ ಚುನಾವಣೆಯಲ್ಲಿ ಸೋಲಿಸಿದರು ಎಂದು ಆರೋಪಿಸಿದರು. ಕಾರ್ಯಕ್ರಮದಲ್ಲಿ ಪಂಃ ಅಧ್ಯಕ್ಷ ಆದಿನಾರಾಯಣ,ಡಿಸಿಸಿ ಬ್ಯಾಂಕಿನ ನಿರ್ದೇಶಕ ರಂಗನಾಥಾಚಾರಿ,ಬಂಗಾರಪೇಟೆ ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್ ಮುನಿರಾಜು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ವಿ ನಾಗರಾಜ್, ಟಿ ಮಹದೇವಪ್ಪ,ಜಿ ವಿ ವೆಂಕಟೇಶ್ ,ಮಾಜಿ ತಾ ಪಂ ಸದಸ್ಯ ಜೆಸಿಬಿ ನಾರಾಯಣಪ್ಪ, ವೆಂಕಟೇಶ್, ಪಂ ಸದಸ್ಯರಾದ ಪಾರ್ಥಸಾರಥಿ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ