ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ 5 ಕೋಟಿ ರು. ಅನುದಾನ: ಪೊನ್ನಣ್ಣ

KannadaprabhaNewsNetwork |  
Published : Sep 19, 2024, 01:55 AM IST
ಚಿತ್ರ : 18ಎಂಡಿಕೆ4 : ಕ್ರೀಡಾ ವಸತಿ ನಿಲಯ ನಿರ್ಮಾಣ ಸಂಬಂಧ ಶಾಸಕರಾದ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು.  | Kannada Prabha

ಸಾರಾಂಶ

ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ 5 ಕೋಟಿ ರು. ಬಿಡುಗಡೆಯಾಗಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ ಸಂಬಂಧ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳೀಯರಾದ ಮೂಕಳೇರ ಕುಶಾಲಪ್ಪ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬುಧವಾರ ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ 5 ಕೋಟಿ ರು. ಬಿಡುಗಡೆಯಾಗಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ ಸಂಬಂಧ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳೀಯರಾದ ಮೂಕಳೇರ ಕುಶಾಲಪ್ಪ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬುಧವಾರ ಸಭೆ ನಡೆಸಿದರು.

ಪೊನ್ನಂಪೇಟೆಯ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿ.ಪಂ. ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಸ್ವಾತಂತ್ರ್ಯ ಪೂರ್ವದಿಂದಲೂ ಪೊನ್ನಂಪೇಟೆ ಪ್ರೌಢಶಾಲೆ ಇತ್ತು. ಪ್ರೌಢಶಾಲೆಗೆ ಒಂದು ಇತಿಹಾಸವಿದ್ದು, ಇದರ ಅಸ್ತಿತ್ವ ಉಳಿಸಿಕೊಳ್ಳುವಂತಾಗಬೇಕು. ಇಲ್ಲಿನ ವಿದ್ಯಾರ್ಥಿಗಳಿಗೂ ಅನುಕೂಲವಾಗಬೇಕು ಎಂದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಸರ್ಕಾರದಿಂದ ಪೊನ್ನಂಪೇಟೆಯ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಬಜೆಟ್‌ನಲ್ಲಿ 5 ಕೋಟಿ ರು. ಪ್ರಕಟಿಸಲಾಗಿತ್ತು, ಅದರಂತೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ಆರಂಭಕ್ಕೆ ಚಾಲನೆ ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯವಿರುವ ಭೂಮಿಯನ್ನು ಕ್ರೀಡಾ ಇಲಾಖೆಗೆ ಒದಗಿಸಬೇಕಿದೆ ಎಂದು ತಿಳಿಸಿದರು.

ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ಆವರಣದ ಜಾಗ ವೀಕ್ಷಿಸಿದ ಪೊನ್ನಣ್ಣ, ಅಗತ್ಯವಿರುವ ಭೂಮಿ ಸರ್ವೇ ಮಾಡಿ ನೀಲನಕ್ಷೆ ತಯಾರಿಸುವಂತೆ ಎಂಜಿನಿಯರ್‌ಗಳಿಗೆ ಸೂಚಿಸಿದರು.

ಪೊನ್ನಂಪೇಟೆಯ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಕೋಟಿ ರು. ಬಿಡುಗಡೆ ಮಾಡಿದ್ದು, ಶೀಘ್ರ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.

ತಹಸೀಲ್ದಾರ್‌ ಮೋಹನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್, ಪ್ರಮುಖರಾದ ಪಿ.ಕೆ.ಪೊನ್ನಪ್ಪ, ಪ್ರಮೋದ್ ಗಣಪತಿ, ಸಾಜಿ ಅಚ್ಚುತ್ತನ್ ಮತ್ತಿತರರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌