ಹುಮನಾಬಾದ್: ಗ್ರಾಮದ ಪ್ರತಿಯೊಂದು ಮನೆಯವರು ಆರೋಗ್ಯ ದೃಷ್ಟಿಯಿಂದ ಯೋಜನೆ ಜಲ್‌ಜೀವನ ಮಿಷನ್ ಯೋಜನೆ ಸದಪಯೋಗ ಮಾಡಿಕೊಳ್ಳಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ ಕಳಪೆಯಾಗದಂತೆ ಗ್ರಾಮಸ್ಥರು ನಿಗಾವಹಿಸಬೇಕು ಎಂದು ಶಾಸಕ ಡಾ.ಸಿದ್ದು ಪಾಟೀಲ್ ತಿಳಿಸಿದರು.
ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಜಲಜೀವನ್ ಮಿಷನ್ ಯೋಜನೆ ಹಿಂದಿನ ಮಾಜಿ ಶಾಸಕ ರಾಜಶೇಖರ ಪಾಟೀಲ್ ಕೈಗೆತ್ತಿಕೊಂಡಿದ್ದರು ಎಂದು ಅವರು ಹೇಳಿದರಲ್ಲದೆ ಗ್ರಾಮದಲ್ಲಿ ಪೈಪಲೈನ್ ಅಳವಡಿಸಿ ಬಳಿಕ ವಿಧಾನ ಪರಿಷತ್ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರ ಬಳಿ ನಿಯೋಗ ತೆರಳಿ ಕಾರಂಜಾ ಜಲಾಶಯದಿಂದ ನೀರು ಪೂರೈಕೆಗೆ ಮನವಿಸುವದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಮಾತನಾಡಿ. ಗ್ರಾಮೀಣ ಭಾಗದ ಜನರಿಗೆ ಉಂಟಾಗಿದ್ದ ಕುಡಿಯುವ ನೀರಿನ ಕೊರತೆಯನ್ನು ನೀಗಿಸುವುದರ ಜೊತೆಗೆ ಗ್ರಾಮೀಣ ಜನರ ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅತ್ಯುತ್ತಮ ಯೋಜನೆ ಇದಾಗಿದೆ ಎಂದು ಹೇಳಿದ ಅವರು. ಶೈಕ್ಷಣಿಕವಾಗಿ ಬೆಳೆಯುತ್ತಿರುವ ಗ್ರಾಮಕ್ಕೆ ಗ್ರಾಮದ ಜನತೆಯ ಅಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವದಾಗಿ ಹೇಳಿದರು.ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಮಾತನಾಡಿ, ಸರ್ಕಾರದ ಮೇಲೆ ಒತ್ತಡ ಹಾಕಿ ಕಾರಂಜಾ ಜಲಾಶಯ ನೀರಿನ ಜೊತೆ ಜೊತೆಗೆ ಗ್ರಾಮದ ಸರ್ವತೋಮುಖ ಪ್ರಗತಿಗಾಗಿ ಸರ್ಕಾರದ ಹಲವಾರು ಯೋಜನೆಗಳ ಅನುಷ್ಠಾನಕ್ಕೆ ನಾವೆಲ್ಲರು ಒಗ್ಗಟ್ಟಿನಿಂದ ಪ್ರಯತ್ನಿಸುವದಾಗಿ ತಿಳಿಸಿದರು.