ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಈ ಬಾರಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಕಲಾಕೃತಿಗಳು ಆಕರ್ಷಣೀಯವಾಗಿ ಕಾಣುತ್ತಿವೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.
ಫಲಪುಷ್ಪ ಪ್ರದರ್ಶನದಲ್ಲಿದ್ದ ಮಹಾತ್ಮ ಗಾಂಧೀಜಿ, ರಾಮ ಮಂದಿರದ ವಿನ್ಯಾಸ, ರಾಮನಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.ಈ ಬಾರಿ ಅರಣ್ಯ ಇಲಾಖೆಯ ಪಕ್ಷಿಧಾಮ, ಕೃಷಿ ಇಲಾಖೆ ಸುಗ್ಗಿ ಹಬ್ಬ, 20 ಸಾವಿರಕ್ಕೂ ಹೆಚ್ಚು ಹೂ ಬಳಸಿ ನಿರ್ಮಿಸಿರುವ ಕಲಾಕೃತಿಗಳು, ಹೂಕುಂಡುಗಳು ಸಸ್ಯಕಾಶಿ ಮಾದರಿಯಲ್ಲಿ ಸೂರ್ಯನಿಗೆ ಮೈಯೊಡ್ಡಿ ನಿಂತಿವೆ. ನಾಡಿನ ಅನ್ನದಾತನ ಮಾದರಿ, ಎತ್ತಿನಗಾಡಿ, ಹಸು, ರೈತನ ಮಾದರಿಗಳು ಎಲ್ಲರ ಗಮನ ಸೆಳೆಯುತ್ತಿವೆ.
ವಿವಿಧ ಇಲಾಖೆಗಳು ಜನ ಸಮಾನ್ಯರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಸ್ತುಪ್ರದರ್ಶನ ಮಳಿಗೆಗಳು ಅನಾವರಣಗೊಳಿಸಲಾಗಿತ್ತು.
ಮಂಡ್ಯ: ಸಂವಿಧಾನದ ಮಹತ್ವ ಮತು ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ಸಮಾರಂಭದ ವೇಳೆ ಸಚಿವರು ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಸಂವಿಧಾನ ಮಹತ್ವ ಹಾಗೂ ಮೌಲ್ಯ ಕುರಿತು ಅರಿವು, ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳು ಕುರಿತಂತೆ ರಾಜ್ಯದ ಮಹಿಳೆಯರು, ಯುವ ಜನತೆ ಹಾಗೂ ಸಾರ್ವಜನಿಕರಿಗೆ ಜಾಥಾ ಅರಿವು ಮೂಡಿಸಲಿದೆ ಎಂದರು.ಗಣರಾಜ್ಯ ದಿನದಂದೇ ರಾಜ್ಯಾದ್ಯಂತ ರಥಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದಿನಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ 233 ಗ್ರಾಪಂಗಳಲ್ಲಿಯೂ ಜಾಗೃತಿ ರಥ ಸಂಚರಿಸಲಿದೆ. ಜಾಥಾದಲ್ಲಿ ಎಲ್ ಇಡಿ ವಾಹನದಲ್ಲಿ ಸಂವಿಧಾನದ ಜಾಗೃತಿ, ಐದು ಗ್ಯಾರಂಟಿ ಯೋಜನೆಯ ವಿಡಿಯೋ ತುಣುಕು ಪ್ರದರ್ಶಿಸಲಾಗುವುದು ಎಂದರು.