ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಎರಡು ವರ್ಷ ಯಶಸ್ವಿಯಾಗಿ ಪೂರೈಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳಿಂದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳ ಕುರಿತು ತಾಲೂಕಿನ ಜನರಿಗೆ ಮಾಹಿತಿ ನೀಡುವ ಜೊತೆಗೆ ಕುಂದು ಕೊರತೆಗಳಿದ್ದಲ್ಲಿ ಆಲಿಸಿ ಸಮಸ್ಯೆ ಬಗೆಹರಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸಲಾಗುವುದು ಎಂದರು.ಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಡಿಪೋ ಲೆಕ್ಕ ಮೇಲ್ವಿಚಾರಕ ಸಮಂತ್‌ಕುಮಾರ್, ಗೃಹಲಕ್ಷ್ಮಿ ಯೋಜನೆ ಕುರಿತು ಸಿಡಿಪಿಒ ಕೃಷ್ಣಮೂರ್ತಿ, ಯುವನಿಧಿ ಕುರಿತು ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿ ಕುಸುಮ, ಅನ್ನಭಾಗ್ಯ ಯೋಜನೆ ಕುರಿತು ಆಹಾರ ನಿರೀಕ್ಷಕ ಅನಿಲ್ ಕುಮಾರ್, ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಅಧಿಕಾರಿ ಸತೀಶ್ ಗೃಹ ಜ್ಯೋತಿ ಯೋಜನೆ ಕುರಿತು ಮಾಹಿತಿ ನೀಡಿದರು.