ರಾಮನಗರ: ನಗರದ ವಸತಿ ರಹಿತರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ 50 ಎಕರೆ ಸರ್ಕಾರಿ ಗೋಮಾಳವನ್ನು ಗುರುತಿಸಿದ್ದು, ಜತೆಗೆ ಖಾಸಗಿಯವರಿಂದ 50 ಎಕರೆ ಭೂಮಿ ಖರೀದಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಒಟ್ಟಾರೆ 100 ಎಕರೆ ಪ್ರದೇಶದಲ್ಲಿ 5 ಸಾವಿರ ಜನರಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಜಮೀನು ಖರೀದಿಗೆ 47 ಕೋಟಿ:
ಸರ್ಕಾರಿ ಗೋಮಾಳದ ಜತೆಗೆ ಖಾಸಗಿಯವರಿಂದ 50 ಎಕರೆ ಭೂಮಿ ಖರೀದಿಗೆ 47 ಕೋಟಿ ರು. ನಿಗದಿಪಡಿಸಿದೆ. ಜಮೀನುಗಳನ್ನು ಗುರುತಿಸಿದ್ದು ಜಿಲ್ಲಾಧಿಕಾರಿಗಳ ಜೊತೆ ಸಭೆನಡೆಸಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಮೊದಲ ಹಂತದಲ್ಲಿ 3ರಿಂದ 5 ಸಾವಿರ ಮಂದಿಗೆ ಮಾತ್ರ ನಿವೇಶನ ಹಂಚಿಕೆ ಮಾಡಲಾಗುವುದು. ಈ ಹಿಂದೆ ಸರ್ಕಾರದಿಂದ ಮಂಜೂರಾಗಿದ್ದ 888 ಮಂದಿಗೆ ಮನೆ ಕಟ್ಟಿಕೊಡಲು ಆದ್ಯತೆ ನೀಡಲಾಗುವುದು. 5 ಸಾವಿರ ನಿವೇಶನಗಳಿಗೆ ಮನೆಕಟ್ಟಿಕೊಳ್ಳುವ ಯೋಜನೆ ಬಳಿಕ ಪರಿಚಯಿಸಲಾಗುವುದು ಎಂದರು.ಮಧ್ಯವರ್ತಿಗಲಿಗೆ ಅವಕಾಶವಿಲ್ಲ:
ಗ್ರಾಮೀಣ ಪ್ರದೇಶಕ್ಕೆ 3 ಸಾವಿರ ಮನೆ:
ನಗರಸಭೆ ವ್ಯಾಪ್ತಿಯಲ್ಲಿ ಚರಂಡಿ, ರಸ್ತೆ ನಿರ್ಮಾಣಕ್ಕಾಗಿ 82 ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು ಇದಕ್ಕೆ ಡಿಪಿಆರ್ ಸಿದ್ದಪಡಿಸಬೇಕಿದೆ. ಇದರೊಂದಿಗೆ ಅರ್ಕಾವತಿ ನದಿಯ ಎರಡೂ ಬದಿಯಲ್ಲಿ ವಾಕಿಂಗ್ ಪಾತ್ ನಿರ್ಮಾಣಕ್ಕೆ 134 ಕೋಟಿ, 15 ಕೋಟಿ ರು. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲು ಸೂಚಿಸಲಾಗಿದೆ. ನಗರಕ್ಕೆ ಸಂಪೂರ್ಣ ಮೂಲಸೌಕರ್ಯ ಕಲ್ಪಿಸಲು 500 ಕೋಟಿ ಅಗತ್ಯವಿದ್ದು, ಇದನ್ನು ಹಂತಹಂತವಾಗಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.
ಕಾವೇರಿ ಹಾಗೂ ಶಿಂಷಾ ನದಿಯಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗಿದ್ದು, 25 ವರ್ಷಗಳಿಂದ ನೀರಿನ ಬವಣೆ ನಿವಾರಿಸಲು ಯಾವುದೇ ಯೋಜನೆ ಸಿದ್ದಪಡಿಸದ ಕಾರಣ ಈ ಸಮಸ್ಯೆ ಎದುರಾಗಿದೆ. ನಗರಕ್ಕೆ 18 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ. ತಾತ್ಕಾಲಿಕವಾಗಿ 10 ಟ್ಯಾಂಕರ್‌ಗಳನ್ನು ನೀರು ಪೂರೈಕೆಗೆ ಸಿದ್ದಪಡಿಸಲಾಗಿದೆ. ಇನ್ನು ನೆಟ್ಕಲ್ ಯೋಜನೆ ಶೇ.95ರಷ್ಟು ಪೂರ್ಣಗೊಂಡಿದ್ದು, ಕೆಲ ಅಡಚಣೆಗಳಿಂದಾಗಿ ಕಾಮಗಾರಿ ವಿಳಂಬವಾಗಿದ್ದು ಇದನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಬಾಕ್ಸ್..........
ರಾಮನಗರ: ರಾಮದೇವರ ಬೆಟ್ಟದಲ್ಲಿ ದಕ್ಷಿಣ ಅಯೋಧ್ಯೆ ಮಾದರಿಯಲ್ಲಿ ಶ್ರೀರಾಮನ ದೇವಾಲಯ ಕಟ್ಟುತ್ತೇವೆ. ಈ ಕುರಿತು ಬಜೆಟ್‌ನಲ್ಲಿ ತೀರ್ಮಾನ ಮಾಡಲಾಗುವುದು. ದೇಶವೇ ತಿರುಗಿ ನೋಡುವ ರೀತಿಯಲ್ಲಿ ರಾಮಮಂದಿರ ಕಟ್ಟುತ್ತೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಮತಕ್ಕಾಗಿ ರಾಮನ ಬಳಸುವುದಿಲ್ಲ:
ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನಾವು ರಾಮಮಂದರಿ ನಿರ್ಮಾಣ ಮಾಡುತ್ತಿಲ್ಲ. ಮಂದಿರವನ್ನು ತರಾತರಿಯಲ್ಲಿ ನಿರ್ಮಿಸಲು ಸಾಧ್ಯವಿಲ್ಲ. ರಾಮಮಂದಿರ ಯೋಜನೆ ಅಂತಿಮ ರೂಪ ತಳೆಯಲು ಸುಮಾರು 6 ತಿಂಗಳು ಬೇಕಿದ್ದು, ನಾವು ಬೇರೆಯವರಂತೆ ಮತಕ್ಕಾಗಿ ರಾಮನನ್ನು ಬಳಸುವುದಿಲ್ಲ. ಎಲ್ಲಾ ಜನತೆ, ಎಲ್ಲಾ ಧರ್ಮ, ಎಲ್ಲಾ ಜಾತಿಯನ್ನು ಒಗ್ಗೂಡಿಸುವ ಗಾಂಧೀಜಿ ತತ್ವವನ್ನು ಅಳವಡಿಸಿಕೊಂಡು ಕೆಲಸ ಮಾಡುತ್ತೇವೆ ಎಂದರು.ಪೊಟೋ೨೩ಸಿಪಿಟಿ೧: ರಾಮನಗರ ತಾಲೂಕಿನ ೫ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.