ಆಡುವಾಗ ಗೇಟ್‌ ಬಿದ್ದು5 ವರ್ಷದ ಮಗು ಸಾವು

KannadaprabhaNewsNetwork |  
Published : May 10, 2026, 01:45 AM IST
ತರಕಾರಿ  | Kannada Prabha

ಸಾರಾಂಶ

ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಗೇಟ್ ಬಿದ್ದು ಒಂದು ಮಗು ಸಾವನ್ನಪ್ಪಿ, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ.

ಪೀಣ್ಯ ದಾಸರಹಳ್ಳಿ: ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಗೇಟ್ ಬಿದ್ದು ಒಂದು ಮಗು ಸಾವನ್ನಪ್ಪಿ, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಇಮಾಮ್ ಮತ್ತು ರಮೀಜಾ ದಂಪತಿಗಳ ಮಗು ಮೃತ ಗೌಸಿಯಾ(5) ಮೃತ ಮಗು. ಇಮಾಮ್ ತಂಗಿ ಶಕೀಲಾ ಅವರ ಸುಮಯ(03) ಎಂಬ ಮಗುವಿಗೆ ಕಾಲು ಮುರಿದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಾರಕಾನಗರದಲ್ಲಿರುವ ಮನೆ ರವಿಶಂಕರ್ ಅವರಿಗೆ ಸೇರಿದ್ದಾಗಿದೆ. ಕಳೆದ 5 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದ ದಂಪತಿಗಳು ಬಸ್ ನಿಲ್ದಾಣದ ಬಳಿ ಹಣ್ಣು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಈಗ ಮಗುವನ್ನು ಕಳೆದುಕೊಂಡ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯಕ್ಕ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಈ ಸಂಬಂಧ ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಕ್ಷತೆ, ಪಾರದರ್ಶಕತೆ ಇದ್ದರೆ ಸಂಘಟನೆ ಪ್ರಗತಿ: ಮಲ್ಲಿಕಾರ್ಜುನ ಬಳ್ಳಾರಿ
ಫಾಸ್ಟ್‌ಫುಡ್‌ ಬದಲು ತರಕಾರಿ, ಹಣ್ಣು ದೇಹಕ್ಕೆ ಉತ್ತಮ