ಎಂಎಸ್‌ ಪೈಪ್ ಅಳವಡಿಕೆಗೆ 50.13 ಕೋಟಿ ಅನುಮೋದನೆ

KannadaprabhaNewsNetwork |  
Published : Dec 19, 2025, 03:15 AM IST
ವಿಜಯಪುರ | Kannada Prabha

ಸಾರಾಂಶ

ವಿಜಯಪುರ ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ಸಗಟು ನೀರು ಸರಬರಾಜು ಮಾಡುವ ಪಿಎಸ್‌ಸಿ ಕೊಳವೆ ಮಾರ್ಗ ಬದಲಾಯಿಸಿ ಎಂಎಸ್ ಪೈಪ್ ಅಳವಡಿಸುವ ಕಾಮಗಾರಿಗೆ ₹50.13 ಕೋಟಿಗೆ ಆಡಳಿತಾತ್ಮಕ ಅನುಮೋದನೆ ದೊರಕಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ಸಗಟು ನೀರು ಸರಬರಾಜು ಮಾಡುವ ಪಿಎಸ್‌ಸಿ ಕೊಳವೆ ಮಾರ್ಗ ಬದಲಾಯಿಸಿ ಎಂಎಸ್ ಪೈಪ್ ಅಳವಡಿಸುವ ಕಾಮಗಾರಿಗೆ ₹50.13 ಕೋಟಿಗೆ ಆಡಳಿತಾತ್ಮಕ ಅನುಮೋದನೆ ದೊರಕಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಹಾಗೂ ನಗರಕ್ಕೆ ಅಗತ್ಯವಿರುವ 3ನೇ ಹಂತದ ಯೋಜನೆ ಅನುಷ್ಠಾನಕ್ಕಾಗಿ ಸರ್ವೇ ಕಾರ್ಯಕ್ಕೆ ಹಣ ಭರಣಾ ಮಾಡಲು ಮಹಾನಗರ ಪಾಲಿಕೆಗೆ ಕೋರಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ತಿಳಿಸಿದ್ದಾರೆ.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಬೃಹತ್ತಾಗಿ ಬೆಳೆಯುತ್ತಿರುವ ವಿಜಯಪುರ ಮಹಾನಗರವು ಕುಡಿವ ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಹಾಗೂ ಭವಿಷ್ಯತ್ತಿನ ದಿನಗಳಲ್ಲಿ ಇಡೀ ಮಹಾನಗರಕ್ಕೆ ಕುಡಿವ ನೀರಿನ ಸಮಸ್ಯೆ ತಲೆದೊರುವ ಕುರಿತಂತೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನಸೆಳೆದಿದ್ದರು.

ಕೊಲ್ಹಾರದಿಂದ ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಪಿಎಸ್‌ಸಿ ಕೊಳವೆ ಮಾರ್ಗದಲ್ಲಿ ಪದೇ ಪದೇ ಪೈಪ್‌ಗಳು ಒಡೆದು ಅನಾವಶ್ಯಕವಾಗಿ ಸಾಕಷ್ಟು ನೀರು ಸೋರಿಕೆ ಆಗುವುದಲ್ಲದೆ, ದುರಸ್ತಿಗಾಗಿ ಸಮಯ ತೆಗೆದುಕೊಳ್ಳುವುದರಿಂದ ನಗರಕ್ಕೆ ಅಸಮರ್ಪಕವಾಗಿ ನೀರು ಸರಬರಾಜು ಆಗಿ, ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉಲ್ಬಣ ಆಗುತ್ತಿರುವುದನ್ನು ತಪ್ಪಿಸಲು ಬಾಕಿ ಉಳಿದ ಎಂ.ಎಸ್.ಪೈಪ್ ಅಳವಡಿಕೆ ಕಾಮಗಾರಿ ಪೂರ್ಣಗೊಳಿಸುವುದು ಅವಶ್ಯವಿದೆ. ಅದೇ ರೀತಿ ಬೃಹತ್ತಾಗಿ ಬೆಳೆಯುತ್ತಿರುವ ವಿಜಯಪುರ ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವುದು ಕೂಡ ಅತೀ ಅವಶ್ಯವಿದೆ ಎಂದು ತಿಳಿಸಿದರು.

ಸಗಟು ನೀರು ಸರಬರಾಜು ಮಾರ್ಗದಲ್ಲಿ ಪಿಎಸ್‌ಸಿ ಕೊಳವೆ ಬದಲಾಯಿಸಿ ಎಂಎಸ್ ಪೈಪ್ ಅಳವಡಿಕೆ ಕಾಮಗಾರಿಗೆ ಅನುಮೋದನೆ ದೊರಕಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುವುದಾಗಿ ಹಾಗೂ ವಿಜಯಪುರ ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆಯ ವಿಸ್ತೃತ ಸರ್ವೇ ಕಾರ್ಯಕ್ಕೆ ₹1.35 ಕೋಟಿ ಠೇವಣಿಕರಿಸಲು ಮಂಡಳಿಯಿಂದ ವಿಜಯಪುರ ಮಹಾನಗರ ಪಾಲಿಕೆಗೆ ಕೋರಲಾಗಿದೆ ಎಂದು ನಗರಾಭಿವೃದ್ಧಿ ಸಚಿವರು ಲಿಖಿತವಾಗಿ ಉತ್ತರ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು