ಡಿ.೧೨ ರ ವರೆಗೆ ಆರ್‌ಟಿಒ ಪ್ರಕರಣಗಳಿಗೆ ಶೇ.೫೦ ರಿಯಾಯಿತಿ

KannadaprabhaNewsNetwork |  
Published : Dec 07, 2025, 03:45 AM IST
ಸತ್ರ ನ್ಯಾಯಾಧೀಶ ಬಸವರಾಜು ಸುದ್ದಿಗೋಷ್ಠಿ  | Kannada Prabha

ಸಾರಾಂಶ

ಡಿ.೧೩ ರಂದು ರಾಷ್ಟ್ರೀಯ ಲೋಕ ಅದಾಲತ್ ದಿನವನ್ನು ಆಚರಿಸುತ್ತಿರುವ ಅಂಗವಾಗಿ ಡಿ.೧೨ ರ ವರೆಗೆ ಆರ್‌ಟಿಒ ಪ್ರಕರಣಗಳಿಗೆ ಶೇ.೫೦ ರಿಯಾಯಿತಿ ನೀಡಿದ್ದು, ಬೇರೆ ಪ್ರಕರಣಗಳಿಗೆ ರಾಜಿ ಮಾಡಿಕೊಂಡಲ್ಲಿ ಕೋರ್ಟ್‌ಗೆ ಕಟ್ಟಿದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು

ಮಂಗಳೂರು: ಡಿ.೧೩ ರಂದು ರಾಷ್ಟ್ರೀಯ ಲೋಕ ಅದಾಲತ್ ದಿನವನ್ನು ಆಚರಿಸುತ್ತಿರುವ ಅಂಗವಾಗಿ ಡಿ.೧೨ ರ ವರೆಗೆ ಆರ್‌ಟಿಒ ಪ್ರಕರಣಗಳಿಗೆ ಶೇ.೫೦ ರಿಯಾಯಿತಿ ನೀಡಿದ್ದು, ಬೇರೆ ಪ್ರಕರಣಗಳಿಗೆ ರಾಜಿ ಮಾಡಿಕೊಂಡಲ್ಲಿ ಕೋರ್ಟ್‌ಗೆ ಕಟ್ಟಿದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಬಸವರಾಜು ತಿಳಿಸಿದರು.ಅವರು ಶನಿವಾರ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಿಸದೇ ಇರುವ ಹಾಗೂ ಮ್ಯಾಯಾಲಯದಲ್ಲಿ ಇಥ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀರ್ಘ್ರದಲ್ಲಿ ಇತ್ಯರ್ಥ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.ಇಲ್ಲಿ ಬರುವವರು ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್‌ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಸೇವಾ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಕಳೆದ ವರ್ಷ ಲೋಕ ಅದಾಲತ್‌ನಲ್ಲಿ ೨,೪೧,೬೦೫ ಪ್ರಕರಣಗಳಲ್ಲಿ ೨,೩೬,೬೧೧ ಪ್ರಕರಣಗಳು ಇತ್ಯರ್ಥವಾಗಿದ್ದು, ೧೫,೪೭,೪೯,೫೭೮ ರು. ಸಂಗ್ರಹವಾಗಿದೆ ಎಂದು ತಿಳಿಸಿದರು.

200 ಪ್ರಕರಣ ಇತ್ಯರ್ಥ

ಜು.೧ ರಿಂದ ಅ.೬ ರವರೆಗೆ ನಡೆದ ಮೀಡಿಯೇಷನ್ ಡ್ರೈವ್‌ನಲ್ಲಿ ದ.ಕ. ಜಿಲ್ಲೆಯಲ್ಲಿ ೩೯,೮೦೩ ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ೨೦೦ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಇದು ರಾಜ್ಯದಲ್ಲಿಯೇ ೫ನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ಮೀಡಿಯೇಷನ್ ಡ್ರೈವ್ ಜನವರಿ ೨ ರಿಂದ ೯೦ ದಿನಗಳ ಕಾಲ ನಡೆಯಲಿದೆ. ಮಂಗಳೂರಿನಲ್ಲೂ ಎಡಿಆರ್ ಕಟ್ಟಡ ನಿರ್ಮಾಣವಾಗಬೇಕಿತ್ತು, ಆದರೆ ಇಲ್ಲಿ ಸೂಕ್ತ ಜಾಗವಿಲ್ಲದಿರುವುದರಿಂದ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ
ಪರಿಸರಕ್ಕೆ ಹಾನಿಯಾಗದಂತೆ ಬೇಡ್ತಿ –ವರದಾ ನದಿ ತಿರುವು ಆಗಲಿ: ಬೊಮ್ಮಾಯಿ