ಕನಕ ಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಬಿಡುಗಡೆ: ಕೋನರಡ್ಡಿ

KannadaprabhaNewsNetwork |  
Published : Nov 20, 2024, 12:32 AM IST
ಕಾರ್ಯಕ್ರಮದಲ್ಲಿ ಶಾಸಕ ಎನ್‌.ಎಚ್‌. ಕೋನರಡ್ಡಿ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನವಲಗುಂದ, ಅಣ್ಣಿಗೇರಿ ನಗರದಲ್ಲಿ ಕನಕ ಭವನ ನಿರ್ಮಿಸಲು ₹ 50 ಲಕ್ಷ, ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ₹ 20 ಲಕ್ಷ ಅನುದಾನವನ್ನು ಸರ್ಕಾರ ನೀಡಿದೆ. ಸ್ಥಳ ಪರೀಕ್ಷಣೆ ಮಾಡಲಾಗಿದೆ.

ನವಲಗುಂದ:

ಕುಲ, ಕುಲವೆಂದು ಹೊಡದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ ಎಂಬ ಕನಕದಾಸ ವಾಣಿಯಂತೆ ನಾವೆಲ್ಲರೂ ನಡೆದುಕೊಳ್ಳಬೇಕು. ಎಲ್ಲ ಸಮಾಜದ ಜತೆ ಹೊಂದಾಣಿಕೆಯಿಂದ ಬೆರೆತು ಜಾತ್ಯಾತೀತವಾಗಿ ಬದುಕಲು ಕಲಿಸಿದ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕೆಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಪಟ್ಟಣದ ತಹಸೀಲ್ದಾರ್ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಮಾತನಾಡಿದರು.

ಇದೇ ವೇಳೆ ನವಲಗುಂದ, ಅಣ್ಣಿಗೇರಿ ನಗರದಲ್ಲಿ ಕನಕ ಭವನ ನಿರ್ಮಿಸಲು ₹ 50 ಲಕ್ಷ, ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ₹ 20 ಲಕ್ಷ ಅನುದಾನವನ್ನು ಸರ್ಕಾರ ನೀಡಿದೆ. ಸ್ಥಳ ಪರೀಕ್ಷಣೆ ಮಾಡಲಾಗಿದೆ. ಶೀಘ್ರದಲ್ಲಿಯೇ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಇದೇ ವೇಳೆ ಕೋನರಡ್ಡಿ ಅವರನ್ನು ಕುರುಬ ಸಮಾಜದ ಪರವಾಗಿ ಸನ್ಮಾನಿಸಲಾಯಿತು. ವಿರಕ್ತಮಠದ ಮುರಗಯ್ಯಜನವರು ಸಾನ್ನಿಧ್ಯ ವಹಿಸಿದ್ದರು. ತಹಸೀಲ್ದಾರ್ ಸುಧೀರ್ ಸಾಹುಕಾರ, ಸಿಪಿಐ ರವಿಕುಮಾರ ಕಪ್ಪತ್ತನವರ, ಹಿಂದುಳಿದ ವರ್ಗಗಳ ಅಧಿಕಾರಿ ನಾಗರತ್ನಾ ಕ್ಯಾಸನೂರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಪಿಎಸ್ಐ ಜನಾರ್ಧನ್ ಬಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕು ಅಧ್ಯಕ್ಷ ಯೋಗಪ್ಪ ಗೊಲನಾಯ್ಕರ, ಪ್ರೇಮಾ ಹತ್ತಿಕಟಗಿ, ಹನುಮಂತಪ್ಪ ಮರಲಕ್ಕನ್ನವರ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಕಿ ಲಕ್ಷ್ಮಿ ಶನಿವಾರದೊಳಗೆ ಮಹಿಳೆಯರ ಬ್ಯಾಂಕ್‌ ಖಾತೆಗೆ
ರಾಜಣ್ಣ ಸಿಎಂಗಷ್ಟೇ ಅಲ್ಲ, ನನಗೂ ಪರಮಾಪ್ತ: ಡಿಕೆಶಿ