ಅಕ್ರಮ ಮದ್ಯ ಮಾರಿದರೆ 50 ಸಾವಿರ ದಂಡ!

KannadaprabhaNewsNetwork |  
Published : Jun 02, 2025, 12:05 AM IST
1ಸಿಎಚ್‌ಎನ್‌52ಗುಂಡ್ಲುಪೇಟೆ ತಾಲೂಕಿನ ಭೀಮನಬೀಡಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ ದಂಡದ ಎಚ್ಚರಿಕೆ ನೀಡಿದ ಯಜಮಾನರೊಬ್ಬರು. | Kannada Prabha

ಸಾರಾಂಶ

ಗ್ರಾಮದಲ್ಲಿ ಗ್ರಾಮಸ್ಥರು ಸಭೆ ನಡೆಸಿದ್ದು, ಅಕ್ರಮ ಮದ್ಯ ಮಾರಾಟ ಮಾಡಿದವರಿಗೆ 50 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಲು ಸಭೆಯಲ್ಲಿದ್ದವರು ಒಪ್ಪಿಗೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲು ಗ್ರಾಮಸ್ಥರೇ ಮುಂದಾಗಿದ್ದು, ಗ್ರಾಮದ ಯಜಮಾನರು, ಮುಖಂಡರು, ಯುವಕರ ಜೊತೆ ರೈತ ಸಂಘ ಅಕ್ರಮ ಮಧ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಗ್ರಾಮದಲ್ಲಿ ಗ್ರಾಮಸ್ಥರು ಸಭೆ ನಡೆಸಿದ್ದು, ಅಕ್ರಮ ಮದ್ಯ ಮಾರಾಟ ಮಾಡಿದವರಿಗೆ 50 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಲು ಸಭೆಯಲ್ಲಿದ್ದವರು ಒಪ್ಪಿಗೆ ಸೂಚಿಸಿದ್ದಾರೆ.ಒಂದು ವೇಳೆ ಇನ್ಮುಂದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ರೈತ ಸಂಘದ ಕಾರ್ಯಕರ್ತರೇ ಅವರ ಮನೆಗೆ ಹೋಗಿ ಹಿಡಿದು ಪೊಲೀಸರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ತಾಲೂಕಿನ ಅಣ್ಣೂರು ಕೇರಿಯಲ್ಲೂ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲು ಸಭೆ ನಡೆಸಿ, ಮದ್ಯ ಮಾರುತ್ತಿದ್ದವರೇ ಮದ್ಯದ ಪೋಚ್ ಗ್ರಾಮಸ್ಥರ ಮುಂದಿಟ್ಟು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು.

ಹಿಂದುಳಿದ ವರ್ಗದವರೇ ಹೆಚ್ಚಿರುವ ಭೀಮನಬೀಡು ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟದ ವಿರುದ್ಧ ಸಿಡಿದೆದ್ದಿರುವುದು ನಿಜಕ್ಕೂ ಮೆಚ್ಚುವ ಸಂಗತಿಯಾಗಿದೆ.1ಸಿಎಚ್‌ಎನ್‌52

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ ದಂಡದ ಎಚ್ಚರಿಕೆ ನೀಡಿದ ಯಜಮಾನರೊಬ್ಬರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌