ಬಿಎಸ್‌ವೈ ಅಭಿಮಾನೋತ್ಸವಕ್ಕೆ 50 ಸಾವಿರ ಕಾರ್ಯಕರ್ತರು

KannadaprabhaNewsNetwork |  
Published : May 07, 2026, 02:45 AM IST
6ಕೆಕೆಆರ್1:ಕುಕನೂರು ತಾಲೂಕಿನ ಇಟಗಿ ಗ್ರಾಮದ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಯಡಿಯೂರಪ್ಪನವರ ೫೦ನೇ ಅಭಿಮಾನೋತ್ಸವ ಪೋಸ್ಟರ್‌ನ್ನು ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಬುಧವಾರ  ಬಿಡುಗಡೆಗೊಳಿಸಿದರು.  | Kannada Prabha

ಸಾರಾಂಶ

ಕ್ಷೇತ್ರದಲ್ಲಿ ಕಟ್ಟಡ ನಿರ್ಮಾಣ ಮಾಡಿದ ನಂತರ ಅದಕ್ಕೆ ತಕ್ಕಂತೆ ಸೌಲಭ್ಯ ಒದಗಿಸುವುದು ಮುಖ್ಯವಾಗಿದೆ.

ಕುಕನೂರು: ಚಿತ್ರದುರ್ಗದಲ್ಲಿ ಮೇ ೯ರಂದು ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷದ ಜನ ಸೇವೆ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಹೇಳಿದರು.

ತಾಲೂಕಿನ ಇಟಗಿ ಗ್ರಾಮದ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಯಡಿಯೂರಪ್ಪನವರ ೫೦ನೇ ಅಭಿಮಾನೋತ್ಸವ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಚಿತ್ರದುರ್ಗದ ಮಾದರ ಚನ್ನಯ್ಯ ಗುರುಪೀಠದ ಪಕ್ಕದಲ್ಲಿ ಮೇ ೮ ರಂದು ಸಂಜೆ ೬ ಗಂಟೆಗೆ ವಿವಿಧ ಕಲಾ ತಂಡಗಳಿಂದ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು. ಮೇ ೯ ರಂದು ಬೃಹತ್ ಕಾರ್ಯಕ್ರಮ ಬೆಳಗ್ಗೆ ೧೧ ಗಂಟೆಗೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮೀತ್ ಶಾ ಆಗಮಿಸಲಿದ್ದು. ರಾಜ್ಯದ ಸಾವಿರಕ್ಕೂ ಅಧಿಕ ಮಠಾಧೀಶರು ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ೪೦ ರಿಂದ ೫೦ ಸಾವಿರ ಕಾರ್ಯಕರ್ತರು ಆಗಮಿಸಲಿದ್ದಾರೆ, ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಇನ್ನೂ ಸ್ವಯಂ ಪ್ರೇರಣೆಯಿಂದ ಸಾಕಷ್ಟು ಅಭಿಮಾನಿಗಳು ಆಗಮಿಸಲಿದ್ದಾರೆ ಎಂದರು.

ಕ್ಷೇತ್ರದಲ್ಲಿ ಕಟ್ಟಡ ನಿರ್ಮಾಣ ಮಾಡಿದ ನಂತರ ಅದಕ್ಕೆ ತಕ್ಕಂತೆ ಸೌಲಭ್ಯ ಒದಗಿಸುವುದು ಮುಖ್ಯವಾಗಿದೆ. ಇಂಜಿನಿಯರ್ ಕಾಲೇಜು ಪ್ರಾರಂಭಗೊಂಡು ೪ ರಿಂದ ೫ ಬ್ಯಾಚ್ ಹೊರಗಡೆ ಹೋಗಿದೆ. ಇದುವರೆಗೂ ಸರಿಯಾಗಿ ಉಪನ್ಯಾಸಕರನ್ನು ಒದಗಿಸಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗುತ್ತದೆ. ಕಲಿತ ಹೊರಗಡೆ ಹೋದ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿಲ್ಲ. ಕುಡಿವ ನೀರಿನ ಸಮಸ್ಯೆ ಕ್ಷೇತ್ರದಲ್ಲಿ ಸಾಕಷ್ಟು ಇದೆ. ಕೇವಲ ಹಣದ ದುರ್ಬಳಕೆಯಾಗುತ್ತದೆ. ಇನ್ನೂ ತಾಲೂಕು ಕೇಂದ್ರದಲ್ಲಿ ನ್ಯಾಯಾಲಯ, ತಹಸೀಲ್ದಾರ್ ಕಚೇರಿ ನಿರ್ಮಾಣ ಮಾಡುವುದು ಅಗತ್ಯವಿದೆ. ಆದರೆ, ಮುಜರಾಯಿ ಇಲಾಖೆಯ ಭೂಮಿಯಲ್ಲಿ ನಿರ್ಮಾಣ ಮಾಡುವುದು ಎಷ್ಟು ಸರಿ? ಪ್ರತ್ಯೇಕ ಭೂಮಿ ಖರೀದಿ ನಿರ್ಮಾಣ ಮಾಡಬಹುದು. ಈ ಹಿಂದೆ ತಹಸೀಲ್ದಾರ್ ಕಚೇರಿ ನಿರ್ಮಾಣಕ್ಕೆ ಭೂಮಿ ಗುರುತಿಸಲಾಗಿತ್ತು. ಈ ಹಿಂದೆ ಗುದ್ನೇಶ್ವರ ದೇವಸ್ಥಾನದ ಜಾಗದಲ್ಲಿ ಹಲವು ಕಟ್ಟಡ ನಿರ್ಮಾಣ ಮಾಡಲಾಗಿದೆ. ಉಳಿದ ಜಾಗ ದೇವಸ್ಥಾನದ ಅಭಿವೃದ್ಧಿಗೆ ಅಗತ್ಯವಿದ್ದು, ಅದರಲ್ಲೂ ಸರ್ಕಾರಿ ಕಚೇರಿ ನಿರ್ಮಾಣ ಮಾಡುವುದು ಸರಿಯಲ್ಲ. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಯಲಬುರ್ಗಾದಲ್ಲಿ ಇಡ್ಲಿ, ವಡ್ಡಾ ಸಿಗುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದಾರೆ. ಆದರೆ, ಅಭಿವೃದ್ಧಿ ಪಡಿಸಲಾಗಿದೆ ಎಂದು ಹೇಳುತ್ತಾರೆ ಎಂದರು.

ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ವಿಜಯಕುಮಾರ ತಾಳಕೇರಿ, ರೈತ ಮೋರ್ಚಾ ಉಪಾಧ್ಯಕ್ಷ ವಿರುಪಾಕ್ಷಪ್ಪ ಹುಳ್ಳಿ, ಜಿಲ್ಲಾ ಬಿಜೆಪಿ ವಕ್ತಾರ ಸೋಮಶೇಖರಗೌಡ ಜೆ. ಸೊಂಪೂರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಹೆ-ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಒಪ್ಪಂದ
ಉಡುಪಿ: ಅಗ್ನಿಶಾಮಕ ದಳದ ಬಲವರ್ಧನೆ ಬಿಜೆಪಿ ಯುವಮೋರ್ಚಾ ಮನವಿ