ರಾಜ್ಯದಲ್ಲಿ 500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ಬಿ.ವೈ.ವಿಜಯೇಂದ್ರ

KannadaprabhaNewsNetwork |  
Published : Feb 13, 2024, 12:48 AM ISTUpdated : Feb 13, 2024, 12:36 PM IST
BY Vijayendra

ಸಾರಾಂಶ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ರೈತರ ಆತ್ಮಹತ್ಯೆ ಕುರಿತು ಸುಳ್ಳು ಹೇಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ರೈತರ ಆತ್ಮಹತ್ಯೆ ಕುರಿತು ಸುಳ್ಳು ಹೇಳಿಸಿದ್ದಾರೆ. 

ಭೀಕರ ಬರಗಾಲದ ಈ ಸಂದರ್ಭದಲ್ಲೂ ರೈತರಿಗೆ ಏಳು ಗಂಟೆ ವಿದ್ಯುತ್‌ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.

ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಸೋಮವಾರ ಬಿಜೆಪಿ ಗ್ರಾಮ ಪರಿಕ್ರಮ ಯಾತ್ರೆಯ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಸುದ್ದಿಗಾರರ ಜತೆಗೆ ಮಾತನಾಡಿ, ದೇಶದಲ್ಲಿ ರೈತರ ಹೆಸರಲ್ಲಿ ಪ್ರಮಾಣವಚನ ಸ್ಬೀಕರಿಸಿದ ಮುಖ್ಯಮಂತ್ರಿಯಿದ್ದರೆ ಅದು ಯಡಿಯೂರಪ್ಪನವರು ಮಾತ್ರ. 

ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದವರು ಅವರು. ಹಾಲಿಗೆ ಪ್ರೋತ್ಸಾಹಧನ ಮತ್ತು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿದ್ದು, ಬರದ ಸಂದರ್ಭದಲ್ಲಿ ಏ‍‍ಳು ತಾಸು ವಿದ್ಯುತ್ ಕೊಟ್ಟದ್ದು ಯಡಿಯೂರಪ್ಪನವರ ಸಾಧನೆ ಎಂದರು.

ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಕಂಬ ಅಳವಡಿಸಿ ಸಂಪರ್ಕ ಕಲ್ಪಿಸಲು 25-30 ಸಾವಿರ ರು. ಕೊಟ್ಟರೆ ಸಾಕಾಗಿತ್ತು. ಆದರೆ ಈ ಸರ್ಕಾರದಲ್ಲಿ 2.50 ಯಿಂದ 3 ಲಕ್ಷ ರು. ಆಗುತ್ತಿದೆ. ಲಂಚ ಸೇರಿ 5 ಲಕ್ಷ ತಗಲುತ್ತದೆ. 

ಇದು ಬಡವರ, ರೈತರ ಸರ್ಕಾರ ಅಲ್ಲ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿರೋದು ಶೇ.50 ಕಮಿಷನ್ ಪಡೆಯುವ ಸರ್ಕಾರ, ರೈತ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ಗಂಡಸಿ ಶಿವರಾಂ ಅವರೇ ಹೇಳಿದ್ದಾರೆ ಎಂದರು.

200 ಯುನಿಟ್‌ ಉಚಿತ ವಿದ್ಯುತ್‌ ಎಂದ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್‌ ನೀಡಿದ್ದರೆ ಇಂದು ಅನ್ನದಾತರ ಆತ್ಮಹತ್ಯೆ ನಡೆಯುತ್ತಿರಲಿಲ್ಲ. ಉಚಿತ ಬಸ್‌ ಎಂದು ಹೇಳಿ ಮಕ್ಕಳಿಗೆ ಬಸ್‌ ನೀಡಿಲ್ಲ. ಸ್ಟ್ಯಾಂಪ್‌ ಡ್ಯೂಟಿ ದರ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದರು.

ಇಂಥ ದರಿದ್ರ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲು ಜನ ತೀರ್ಮಾನ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್‌ ಒಂದಾಗಿ ರಾಜ್ಯದಲ್ಲಿ ಚುನಾವಣೆ ಎದುರಿಸುತ್ತಿದ್ದು, ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲಲಿದ್ದೇವೆ. ಈ ಮೂಲಕ ಪ್ರಧಾನಿ ಮೋದಿಯವರ ಕೈ ಬಲಪಡಿಸಲಿದ್ದೇವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ