ಕಾಂಗ್ರೆಸ್‌ ರಾಜ್ಯ ಸಮ್ಮೇಳನಕ್ಕೆ ಮೂಲ್ಕಿ ತಾಲೂಕಿನಿಂದ 5000 ಮಂದಿ: ಮಿಥುನ್ ರೈ

KannadaprabhaNewsNetwork |  
Published : Feb 17, 2024, 01:15 AM IST
ಹಳೆಯಂಗಡಿಯಲ್ಲಿ ಕಾಂಗ್ರೆಸ್‌ ಪತ್ರಿಕಾಗೋಷ್ತಿ  | Kannada Prabha

ಸಾರಾಂಶ

ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮಿಥುನ್‌ ರೈ ಕೋರಿದರು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಫೆ.17ರಂದು ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ವ್ಯಾಪ್ತಿಯ 14 ಪಂಚಾಯಿತಿ ಹಾಗೂ ಎರಡು ಪಟ್ಟಣ ಪಂಚಾಯಿತಿ, ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 5000 ಮಂದಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ ಹೇಳಿದರು. ಹಳೆಯಂಗಡಿಯ ಮೂಲ್ಕಿ ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಮಾವೇಶ ನಡೆಯುತ್ತಿದ್ದು ರಾಜ್ಯ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಸಹಿತ ಅನೇಕ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಯೋಜನೆಯಿಂದ ಸರ್ಕಾರ ಅಭಿವೃದ್ಧಿಯತ್ತ ಸಾಗುತ್ತಿದ್ದು ಕಾರ್ಯಕರ್ತರಿಗೆ ಮತ್ತಷ್ಟು ಬಲ ಬಂದಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ನೋಂದಣಿ ಮಾಡಿದ ಕೀರ್ತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಲ್ಲುತ್ತದೆ. ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕೋರಿದರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕೋ ಆರ್ಡಿನೇಟರ್ ಎಚ್. ವಸಂತ್ ಬರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ನಾಯಕರಾದ ಅಬ್ದುಲ್ ಖಾದರ್, ಧರ್ಮಾನಂದ ಶೆಟ್ಟಿಗಾರ್‌, ಬಾಲಚಂದ್ರ ಕಾಮತ್‌ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ಸಲ್ಲಿ ಯತೀಂದ್ರ ಕಿಚ್ಚು : '5 ವರ್ಷವೂ ನಮ್ಮ ತಂದೆ ಸಿಎಂ, ಇದು ಈಗ ಸೆಟಲ್ಡ್‌ ವಿಚಾರ'