ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ

KannadaprabhaNewsNetwork |  
Published : Jul 15, 2026, 02:45 AM IST
13ಯಕ್ಷ | Kannada Prabha

ಸಾರಾಂಶ

ಉಡುಪಿ ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ ಶನಿವಾರ ಸಂಜೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರುಗಿತು.

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ ಶನಿವಾರ ಸಂಜೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಅಗಲಿದ ಸದಸ್ಯರಿಗೆ, ಕಲಾವಿದರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಹಿಂದಿನ ಮಹಾಸಭೆಯ ವರದಿ ವಾಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ 2025-26ರ ಪರಿಶೋಧಿತ ಲೆಕ್ಕಪತ್ರ ಮಂಡಿಸಿದರು. 2026-27ನೇ ಸಾಲಿಗೆ ಸಿಎ ಅರುಣ್ ನಾಯಕರನ್ನು ಲೆಕ್ಕ ಪರಿಶೋಧಕರನ್ನಾಗಿ ನೇಮಕ ಮಾಡಲಾಯಿತು.ಈ ಎಲ್ಲ ಕಲಾಪಗಳು ಸದಸ್ಯರ ಸೂಚನೆ, ಅನುಮೋದನೆಗಳೊಂದಿಗೆ ಅಂಗೀಕಾರಗೊಂಡವು. 2026-27ನೇ ಸಾಲಿಗೆ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಆಹ್ವಾನಿತ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಎಸ್.ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ ಮಾತನಾಡಿದರು. ಅಧ್ಯಕ್ಷೀಯ ಭಾಷಣದ ನಂತರ ಜತೆಕಾರ್ಯದರ್ಶಿ ವಿದ್ಯಾಪ್ರಸಾದ ವಂದಿಸಿದರು. ಡಾ. ಪ್ರತಿಮಾ ಜೆ. ಆಚಾರ್ಯ ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯ ಅರ್ಥಧಾರಿಗಳಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ
ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ