ಭದ್ರಾ ಮೇಲ್ದಂಡೆಗೆ ಯೋಜನೆಗೆ ₹5300 ಕೋಟಿ ನೀಡಿ: ಕೇಂದ್ರಕ್ಕೆ ಸಂಸದೆ ಮನವಿ

KannadaprabhaNewsNetwork |  
Published : Jul 30, 2024, 12:31 AM IST
29ಕೆಡಿವಿಜಿ8, 9-ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವ ಸಿ.ಆರ್.ಪಾಟೀಲರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಅರ್ಪಿಸಿದರು. | Kannada Prabha

ಸಾರಾಂಶ

ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ₹5300 ಕೋಟಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಸಲ್ಲಿಸಿದ್ದಾರೆ.

- ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವರ ಭೇಟಿಯಾದ ಡಾ.ಪ್ರಭಾ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ₹5300 ಕೋಟಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಸಲ್ಲಿಸಿದರು.

ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದಲ್ಲಿ ಸಚಿವ ಸಿ.ಆರ್‌.ಪಾಟೀಲ ಅವರನ್ನು ಭೇಟಿಯಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರು, ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ಆಸರೆಯಾದ ಭದ್ರಾ ಮೇಲ್ದಂಡೆ ಯೋಜನೆ ಕಾರ್ಯರೂಪಕ್ಕೆ ತರಲು ₹5300 ಕೋಟಿ ಅಗತ್ಯವಿದೆ. ಶೀಘ್ರವೇ ಈ ಅನುದಾನ ಬಿಡುಗಡೆ ಮಾಡಬೇಕು ಎಂದರು.

ಭದ್ರಾ ಅಚ್ಚುಕಟ್ಟು ರೈತರಿಗೆ ಮನವಿ:

ಶಿವಮೊಗ್ಗದ ಮಲವಗೊಪ್ಪದಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿಯ 85ನೇ ನೀರಾವರಿ ಸಲಹಾ ಸಮಿತಿ ಸಭೆ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದಿದೆ. ದಾವಣಗೆರೆ ಅಚ್ಚುಕಟ್ಟು ರೈತರ ಧ್ವನಿಯಾಗಿ ಪಾಲ್ಗೊಳ್ಳಲು ತಾವು ಬಯಸಿದ್ದೆ. ಆದರೆ, ಲೋಕಸಭಾ ಅಧಿವೇಶನದ ಹಿನ್ನೆಲೆ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಿಷಾದಿಸಿದ್ದಾರೆ.

ನನ್ನ ಕ್ಷೇತ್ರದ ರೈತರ ಧ್ವನಿಯಾಗಿ ಐಸಿಸಿ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ, ಲೋಕಸಭಾ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಬೇಕಾದ ಅನಿವಾರ್ಯತೆ ಬಂದಿತು. ದೇವರ ಕೃಪೆಯಿಂದ ಈ ಸಲ ಜಿಲ್ಲೆಯ ಜೀವನಾಡಿ ಭದ್ರಾ ಅಣೆಕಟ್ಟೆ ತುಂಬಿದೆ. ಇಂದಿನ ಸಭೆಯಲ್ಲಿ ಜನಪ್ರತಿನಿಧಿಗಳು, ರೈತ ಮುಖಂಡರು, ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರ ಸಂಘಗಳ ಮುಖಂಡರು ಮಳೆಗಾಲದ ಬೆಳೆಗೆ ನೀರು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಭದ್ರಾ ಅಣೆಕಟ್ಟೆಯಿಂದ ಮಳೆಗಾಲ ಹಾಗೂ ಬೇಸಿಗೆ ಕಾಲದ ಬೆಳೆಗಳಿಗೆ ಎಲ್ಲ ರೈತರಿಗೂ ಅನುಕೂಲ ಆಗುವಂತಹ ತೀರ್ಮಾನವನ್ನು ಐಸಿಸಿ ಸಭೆಯಲ್ಲಿ ಕೈಗೊಳ್ಳಬೇಕು. ಭದ್ರಾ ಅಚ್ಚುಕಟ್ಟು ಪ್ರದೇಶದ ಕಡೆಯ ಭಾಗಕ್ಕೂ ಸಮರ್ಪಕ ನೀರು ತಲುಪುವಂತಾಗಲಿ. ಸೂಳೆಕೆರೆ ಸೇರಿದಂತೆ ಜಿಲ್ಲೆಯ ಇತರೆ ಕೆರೆಗಳಿಗೂ ನೀರು ತುಂಬುವಂತಾಗಲಿ. ಐಸಿಸಿ ಸಭೆಯಲ್ಲಿ ಅಚ್ಚುಕಟ್ಟು ರೈತರಿಗೆ ಪೂರಕ ನಿರ್ಧಾರ ಕೈಗೊಳ್ಳುತ್ತಾರೆಂಬ ವಿಶ್ವಾಸವಿದೆ. ರೈತರ ಬಾಳು ಹಸನಾಗಲಿ ಎಂದು ಡಾ.ಪ್ರಭಾ ಪ್ರಾರ್ಥಿಸಿದ್ದಾರೆ.

- - - -29ಕೆಡಿವಿಜಿ8, 9:

ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವ ಸಿ.ಆರ್.ಪಾಟೀಲರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಅರ್ಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!