ಬ್ಯಾಡಗಿ: ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ಸೆ. 13ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ₹4.46 ಕೋಟಿಗೂ ಅಧಿಕ ಮೊತ್ತದ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಒಟ್ಟು 5587 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.
5587 ಪ್ರಕರಣ ಇತ್ಯರ್ಥ: ಹಿರಿಯ ದಿವಾಣಿ ನ್ಯಾಯಾಲಯದಲ್ಲಿನ 167 ಬಾಕಿ ಪ್ರಕರಣ ಹಾಗೂ 2640 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 2807, ಕಿರಿಯ ದಿವಾಣಿ ನ್ಯಾಯಾಲಯದಲ್ಲಿನ 196 ಬಾಕಿ ಪ್ರಕರಣ ಹಾಗೂ 2584 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 2780 ಪ್ರಕರಣಗಳು ಇತ್ಯರ್ಥಗೊಂಡವು.
ಈ ವೇಳೆ ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಹಾಗೂ ಕಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಸೇರಿದಂತೆ ಹಿರಿಯ ಕಿರಿಯ ವಕೀಲರು ಹಾಗೂ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಮತ್ತು ಪಕ್ಷಗಾರರು ಉಪಸ್ಥಿತರಿದ್ದರು.ಲೋಕ ಅದಾಲತ್‌ನಲ್ಲಿ 84,524 ಪ್ರಕರಣಗಳ ಇತ್ಯರ್ಥಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 98,260 ಪ್ರಕರಣಗಳಲ್ಲಿ 84,524 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹43,70,49,048 ಮೊತ್ತದ ರಾಜಿಯಾಗಿದೆ.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 5,290 ಪ್ರಕರಣಗಳ ಪೈಕಿ 4,370 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹21,68,35,14 ರಾಜಿಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 92,970 ಪ್ರಕರಣಗಳಲ್ಲಿ 82,154 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹22,02,13,900 ಮೊತ್ತದ ರಾಜಿಯಾಗಿದೆ.