ಕನ್ನಡಪ್ರಭ ವಾರ್ತೆ ಹೊಸಪೇಟೆ
ತುಂಗಭದ್ರಾ ಜಲಾಶಯದ ಒಳ ಹರಿವು 72,490 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ 58,869 ಕ್ಯುಸೆಕ್ ನೀರು ಹರಿಸಲಾಗಿದೆ. ಜಲಾಶಯದಿಂದ ನದಿಗೆ ನೀರು ಬಿಟ್ಟಿದ್ದರಿಂದ ಹಂಪಿಯ ಕೆಲ ಸ್ಮಾರಕಗಳು ಜಲಾವೃತವಾಗಿವೆ.ಜಲಾಶಯದ ಸಂಗ್ರಹ ಸಾಮರ್ಥ್ಯ 105.788 ಟಿಎಂಸಿ ಇದ್ದು, ಜಲಾಶಯದಲ್ಲಿ ಈಗ 77.343 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಕ್ರಸ್ಟ್ ಗೇಟ್‌ಗಳು ಮುಕ್ಕಾಗಿವೆ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಈ ವರ್ಷ 80 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ. ಜಲಾಶಯದ 19 ಕ್ರಸ್ಟ್ ಗೇಟ್‌ಗಳನ್ನು ತಲಾ 2.5 ಅಡಿ ಎತ್ತರಿಸಿ ನದಿಗೆ ನೀರು ಹರಿಸಲಾಗಿದೆ.
ಹಂಪಿಯ ಸ್ನಾನಘಟ್ಟ, ವಿಧಿ ವಿಧಾನ ಮಂಟಪಗಳು ಅರ್ಧ ಮುಳುಗಡೆಯಾಗಿದ್ದು, ಶ್ರೀರಾಮಲಕ್ಷ್ಮಣ ದೇವಾಲಯಕ್ಕೆ ತೆರಳುವ ಮಾರ್ಗವೂ ಬಂದ್ ಆಗಿದೆ. ಹಂಪಿಯ ಕಲ್ಲು, ಬಂಡೆಗಳು ಹತ್ತಿ ದೇವಾಲಯಕ್ಕೆ ತೆರಳಿ ಭಕ್ತರು ವೀಕ್ಷಿಸುತ್ತಿದ್ದಾರೆ. ಹಂಪಿಯಲ್ಲಿ ಪುರಂದರ ದಾಸರ ಮಂಟಪ ಸಂಪೂರ್ಣ ಮುಳುಗಡೆಯಾಗಿದ್ದು, ಕಾಲು ಸೇತುವೆ ಕೂಡ ಜಲಾವೃತವಾಗಿದೆ.ಇಂದು ಅಪ್ರೆಂಟಿಸ್ ತರಬೇತಿಗೆ ಆಯ್ಕೆಹೂವಿನ ಹಡಗಲಿ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜು. 7ರಂದು ಬೆಳಗ್ಗೆ 9 ಗಂಟೆಗೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಐಟಿಐ ಪಾಸಾದ ತರಬೇತುದಾರರು ಹಾಗೂ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ತರಬೇತುದಾರರು ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಲ್ಲಿ ಭಾಗವಹಿಸಬಹುದು. ಹಾಜರಾಗುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಆಗಮಿಸಬೇಕು. ಆಸಕ್ತರು 18ರಿಂದ 25 ವರ್ಷ ವಯೋಮಿತಿ ಹೊಂದಿರಬೇಕು. ಹೋಂಡಾ ಮೊಟಾರ್ ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ ಪ್ರೈ.ಲಿ ನ ಉದ್ಯಮದವರು ಅಪ್ರೆಂಟಿಸ್ ತರಬೇತಿ ಹಮ್ಮಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಂಕರ್, ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಹೂವಿನಹಡಗಲಿ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.