ಪ್ರತಿ ತಿಂಗಳು 6.5.ಲಕ್ಷ ಮಹಿಳಾ ಪ್ರಯಾಣಿಕರಿಗೆ ಪ್ರಯೋಜನ : ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Jul 15, 2025, 01:45 AM ISTUpdated : Jul 15, 2025, 01:09 PM IST
ಪ್ಪತಿ ತಿಂಗಳು 6 ರಿಂದ 6.5.ಲಕ್ಷ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಪ್ರಯೋಜನ ಪಡೆಯುತ್ತಿದ್ದಾರೆಃ ಶಾಸಕ ಜಿ.ಹೆಚ್.ಶ್ರೀನಿವಾಸ್  | Kannada Prabha

ಸಾರಾಂಶ

ತರೀಕೆರೆ, ರಾಜ್ಯದಲ್ಲಿ ಪ್ರತೀ ತಿಂಗಳು 6 ರಿಂದ 6.5 ಲಕ್ಷ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

 ತರೀಕೆರೆ :  ರಾಜ್ಯದಲ್ಲಿ ಪ್ರತೀ ತಿಂಗಳು 6 ರಿಂದ 6.5 ಲಕ್ಷ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಸೋಮವಾರ ಪಟ್ಟಣದಲ್ಲಿ ಶಕ್ತಿ ಯೋಜನೆ ಕುರಿತು ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗಿದೆ. ಶಕ್ತಿ ಯೋಜನೆಯಲ್ಲಿ ಈವರೆಗೆ 500 ಕೋಟಿ ಉಚಿತ ಪ್ರಯಾಣ ನಡೆದಿರುವುದು ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು.ಕೆಎಸ್‌ಆರ್‌ಟಿಸಿ ಕಡೂರು ಡಿಪೋ ವ್ಯಾಪ್ತಿಯಲ್ಲಿ ಆರೂವರೆ ಲಕ್ಷ ಟಿಕೇಟ್ ಪಡೆಯಲಾಗಿದೆ. 

ಪಂಚ ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ಹೆಚ್ಚು ಪ್ರಗತಿಯಲ್ಲಿದೆ ಎಂದು ತಿಳಿಸಿದರು.ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್ ಮಾತನಾಡಿ ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳನ್ನು ಪ್ರಕಟಿಸಿ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದು ಕರ್ನಾಟಕ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ. 

ಶಕ್ತಿ ಯೋಜನೆಯಿಂದ ಕಡೂರು ಡಿಪೋ ವಿಭಾಗದಲ್ಲಿ ಪ್ರತಿ ತಿಂಗಳು 6 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸುತ್ತಿದ್ದಾರೆ ಎಂದು ವಿವರಿಸಿದರು. ತಾಪಂ ಇಒ ಡಾ.ದೇವೇಂದ್ರಪ್ಪ, ಅಜ್ಜಂಪುರ ತಾಪಂ ಇಒ ವಿಜಯಕುಮಾರ್, ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎನ್.ಜಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರುಕ್, ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್. ಪ್ರಕಾಶ್‌ವರ್ಮ, ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷ ಟಿ.ಆರ್.ಗಿರೀಶ್, ಡಾ.ಟಿ.ಎನ್.ಜಗದೀಶ್, ಪುರಸಭೆ ಸದಸ್ಯ ಆದಿಲ್‌ ಪಾಷಾ, ಕೆಡಿಪಿ ಸದಸ್ಯ ಗಂಗಾಧರ್, ಗ್ಯಾರೆಂಟಿ ಸಮಿತಿ ಸದಸ್ಯರು, ಕೆಎಸ್‌ಆರ್‌ಟಿಸಿ ಇಲಾಖೆ ಸಿಬ್ಬಂದಿ ಹಾಜರಿದ್ದರು.- 

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ