6 ಬೆಳೆಗಳ ಖರೀದಿ ಕೇಂದ್ರಕ್ಕೆ ಚಾಲನೆ

KannadaprabhaNewsNetwork |  
Published : Oct 25, 2025, 01:03 AM IST
ಹುನಗುಂದ | Kannada Prabha

ಸಾರಾಂಶ

ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರು, ಉದ್ದಿನಕಾಳು, ಸೋಯಾಬಿನ್ ಸೇರಿದಂತೆ ಆರು ಬೆಳೆಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹುನಗುಂದ

ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರು, ಉದ್ದಿನಕಾಳು, ಸೋಯಾಬಿನ್ ಸೇರಿದಂತೆ ಆರು ಬೆಳೆಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ಹುನಗುಂದ- ಇಳಕಲ್ಲ ಅವಳಿ ತಾಲೂಕಿನ ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಸಹಯೋಗದಲ್ಲಿ ಸೂರ್ಯಕಾಂತಿ, ಹೆಸರು, ಉದ್ದಿನಕಾಳು, ಸೋಯಾಬಿನ್ ಸೇರಿದಂತೆ 6 ಬೆಳೆಗಳ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬೆಲೆ ಕುಸಿತದಿಂದ ಕಂಗಾಲಾದ ಅನ್ನದಾತನಿಗೆ ಬೆನ್ನಿಗೆ ನಿಂತಕೊಂಡು ಸೂಕ್ತ ಬೆಂಬಲ ಬೆಲೆಯಲ್ಲಿ ಬೆಳೆಯನ್ನು ಖರೀದಿಸಿ ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಸೂರ್ಯಕಾಂತಿ ಮತ್ತು ಹೆಸರು ಬೆಳೆದ ರೈತರಿದ್ದಾರೆ. ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ತೊಂದರೆಯಲ್ಲಿದ್ದ ರೈತರ ಬೆನ್ನೆಲುಬಾಗಿ ನಮ್ಮ ಸರ್ಕಾರ ನಿಂತುಕೊಂಡಿದೆ. ಸದ್ಯ ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕಿನಲ್ಲಿ ಹುನಗುಂದ, ಇಳಕಲ್ಲ, ನಂದವಾಡಗಿ, ಕರಡಿ, ಸುಳೇಭಾವಿ ಸೇರಿದಂತೆ ಐದು ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈಗಾಗಲೇ 667 ಜನ ರೈತರು ನೋಂದಾಯಿಸಿಕೊಂಡಿದ್ದು. ಇನ್ನೂ ನೋಂದಾಯಿಸಿಕೊಳ್ಳದೆ ಇರುವ ರೈತರು 90 ದಿನಗಳೊಳಗಾಗಿ ನೋಂದಾಯಿಸಿಕೊಂಡು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ರಾಘವೇಂದ್ರ ದಂಡಿನ ಮಾತನಾಡಿ, ಸರ್ಕಾರ ಬೆಂಬಲ ಬೆಲೆಯಡಿ ಹೆಸರುಕಾಳು ಪ್ರತಿ ಕ್ವಿಂಟಲ್‌ಗೆ ₹8,768, ಸೂರ್ಯಕಾಂತಿ ₹7,721, ಉದ್ದಿನಕಾಳು ₹7,800, ಸೋಯಾಬಿನ್ ₹5328, ಶೇಂಗಾ ₹7263, ಹೈಬ್ರಿಡ್ ಜೋಳ ₹3683ರಂತೆ ಬೆಂಬಲ ಬೆಲೆಯಡಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಇದರ ಪ್ರಯೋಜನವನ್ನು ಅವಳಿ ತಾಲೂಕಿನ ರೈತರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಇ.ಡಿ.ಪಾಟೀಲ ಮಾತನಾಡಿದರು. ವೇದಿಕೆಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಜೈನಸಾಬ್ ಹಾಗೇದಾಳ, ನಿರ್ದೇಶಕರ ಮಹಾಲಿಂಗಯ್ಯ ಹಿರೇಮಠ, ಕೃಷಿಕ ಸಮಾಜದ ಅಧ್ಯಕ್ಷ ಸಂಜೀವ ಜೋಶಿ, ಖಜಾಂಚಿ ಬಸವರಾಜ ಹೊಸಮನಿ, ಜಿಲ್ಲಾ ಪ್ರತಿನಿಧಿ ಪ್ರಭು ಇದ್ದಲಗಿ, ಗುರು ಗಾಣಿಗೇರ, ಮಹಾಂತೇಶ ನಾಡಗೌಡ್ರ, ಮಹಾಂತಮ್ಮ ಹೊಸೂರ, ಗಿರಿಜಾ ಗಂಜೀಹಾಳ, ಶಾಂತಾ ಗೌಡಗೇರಿ ಸೇರಿದಂತೆ ಅನೇಕರು ಇದ್ದರು.

PREV

Recommended Stories

ನ.14ರಿಂದ 20ರಿಂದ ರಾಜ್ಯದಲ್ಲಿ ಸಹಕಾರ ಸಪ್ತಾಹ
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ