ಉಡುಪಿ ಪರ್ಯಾಯ: ಮೂಲ ಸೌಕರ್ಯಕ್ಕೆ 6 ಕೋಟಿ ರು.

KannadaprabhaNewsNetwork |  
Published : Jan 07, 2026, 03:00 AM IST
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು | Kannada Prabha

ಸಾರಾಂಶ

ಉಡುಪಿ: ಉಡುಪಿಯ ಶಿರೂರು ಮಠದ ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರು. ವೆಚ್ಚದಲ್ಲಿ ನಗರಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಉಡುಪಿ: ಉಡುಪಿಯ ಶಿರೂರು ಮಠದ ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರು. ವೆಚ್ಚದಲ್ಲಿ ನಗರಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.ಪರ್ಯಾಯೋತ್ಸವದ ಸಿದ್ದತೆಗಳ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು-ರಾತ್ರಿ ಕಾಮಗಾರಿಗಳನ್ನು ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದದಲ್ಲಿ ಶಾಸಕ ಸುನಿಲ್ ಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು