ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ₹6 ಲಕ್ಷ ವಂಚನೆ

KannadaprabhaNewsNetwork |  
Published : Nov 03, 2023, 12:31 AM IST

ಸಾರಾಂಶ

ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ ₹ 6.10 ಲಕ್ಷ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ ಪಡೆಯಲು ಸ್ಕೈಪ್ ಆ್ಯಪ್‌ನಲ್ಲಿ ವಿಡಿಯೋ ಕಾಲ್ ಮಾಡಿ ಠಾಣೆ ತೋರಿಸಿದರು. ನಿಮ್ಮ ಖಾತೆಯಲ್ಲಿರುವ ಹಣವನ್ನು ಆರ್‌ಬಿಐಗೆ ವರ್ಗಾವಣೆ ಮಾಡಬೇಕು. ನೀವು ತಪ್ಪಿತಸ್ಥರು ಅಲ್ಲದಿದ್ದರೆ ನಿಮ್ಮ ಹಣ ಮರಳಿ ನೀಡಲಾಗುವುದು ಎಂದು ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ರವಿ ದೂರಿನಲ್ಲಿ ತಿಳಿಸಿದ್ದಾರೆ.

ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ ₹ 6.10 ಲಕ್ಷ ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ ಪಡೆಯಲು ಸ್ಕೈಪ್ ಆ್ಯಪ್‌ನಲ್ಲಿ ವಿಡಿಯೋ ಕಾಲ್ ಮಾಡಿ ಠಾಣೆ ತೋರಿಸಿದರು. ನಿಮ್ಮ ಖಾತೆಯಲ್ಲಿರುವ ಹಣವನ್ನು ಆರ್‌ಬಿಐಗೆ ವರ್ಗಾವಣೆ ಮಾಡಬೇಕು. ನೀವು ತಪ್ಪಿತಸ್ಥರು ಅಲ್ಲದಿದ್ದರೆ ನಿಮ್ಮ ಹಣ ಮರಳಿ ನೀಡಲಾಗುವುದು ಎಂದು ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ರವಿ ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ