ಕನ್ನಡಪ್ರಭ ವಾರ್ತೆ ರಾಮನಗರ
ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಕೆ.ಶೇಷಾದ್ರಿ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ನಗರಸಭೆಯ 15ನೇ ಹಣಕಾಸು ಯೋಜನೆ ಅನುದಾನ ಬಳಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳ ಅನುಷ್ಠಾನ ಸಂಬಂಧ ಚರ್ಚೆ ನಡೆದು ಅನುದಾನ ಹಂಚಿಕೆಗೆ ಸದಸ್ಯರು ಒಪ್ಪಿಗೆ ಸೂಚಿಸಿದರು. ಪ್ರಸ್ತುತ ಸಾಲಿನ ಬಜೆಟ್ ನಲ್ಲಿರುವ ವಿಷಯಗಳ ಅನುಷ್ಟಾನ ಆಗುತ್ತಿದೆ. ಇನ್ನೊಂದು ವರ್ಷದಲ್ಲಿ ಎಲ್ಲ ಸದಸ್ಯರು ತಮ್ಮ ತಮ್ಮ ವಾರ್ಡ್ ಗಳ ಅಭಿವೃದ್ಧಿ ಮಾಡಿದ ತೃಪ್ತಿಯಾಗುವಷ್ಟರ ಮಟ್ಟಿಗೆ ಅಭಿವೃದ್ಧಿ ಕೆಲಸಗಳು ಸಾಕಾರವಾಗುತ್ತವೆ ಎಂದು ಶೇಷಾದ್ರಿ ಹೇಳಿದರು.
ನಗರಸಭೆ ಸದಸ್ಯ ಮಂಜುನಾಥ್ ಮಾತನಾಡಿ, ಪಕ್ಷಾತೀತವಾಗಿ ಸಮವಾಗಿ ಅನುದಾನ ಹಂಚಿಕೆ ಮಾಡಿರುವುದು ಮತ್ತು ತೇರು ಬೀದಿ ಅಭಿವೃದ್ದಿಗೆ ಅದ್ಯಕ್ಷರು ಬಹಳ ಮುತುವರ್ಜಿ ವಹಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಯುಐಡಿಎಫ್ ನಲ್ಲಿ ಉಳಿದ ಕೆಲಸಗಳನ್ನು ಹಂತ ಹಂತವಾಗಿ ಕೆಲಸ ಮಾಡಲು ಅಧಿಕಾರಿಗಳು ಆಶಕ್ತಿ ವಹಿಸಿ, ಜೊತೆಗೆ ಗುಣಮಟ್ಟ ಕಾಯಬೇಕು ಆಗ ಶಾಶ್ವತ ಕೆಲಸ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು.ಡಾ.ಅಂಬೇಡ್ಕರ್ ಜಯಂತಿ :
ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಆಯಿಷಾಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ , ಆಯುಕ್ತ ಡಾ.ಜಯಣ್ಣ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ರಾಮನಗರ: ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಯಶಸ್ವಿ ಯಾಗಲು ವಿದ್ಯಾರ್ಥಿಗಳಿಗೆ ಮಾನಸಿಕ ಸಿದ್ದತೆ ಬಹಳ ಮುಖ್ಯ ಎಂದು ಅಕ್ಕಾ ಐಎಎಸ್ ಅಕಾಡೆಮಿ ಮುಖ್ಯಸ್ಥ ಡಾ. ಶಿವಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳಿಗೆ ಸಮಯವೇ ಜೀವನ. ಸಮಯವನ್ನು ವ್ಯರ್ಥ ಮಾಡದೆ ಅದ್ಯಯನಕ್ಕೆ ಬಳಸಬೇಕಿದೆ. ಸಮಯ ಪಾಲನೆ, ನೀತಿಯುತ ವ್ಯಕ್ತಿತ್ವ ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲುಗಳಾಗಲು ನೆರವಾಗಲಿವೆ. ಇಂದಿನ ದಿನಗಳಲ್ಲಿ ದುಬಾರಿ ವೆಚ್ಚದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳನ್ನು ಅಣಿಗೊಳಿಸುವ ಸವಾಲು ಪೋಷಕರಿಗೆ ಎದುರಾಗಿದೆ. ಇಂತಹ ಸಮಯದಲ್ಲಿ ತರಬೇತಿಯಿಂದ ವಂಚಿತರಾಗದೆ ಸ್ಪರ್ಧಾತ್ಮಕ ಪರೀಕ್ಷೆ ಎಸುರಿಸಲು ಬಡ ಮಕ್ಕಳಿಗೆ ನಗರಸಭೆ ಉಚಿತ ತರಬೇತಿ ಕೊಡಿಸುವ ಉತ್ತಮ ಕೆಲಸ ಮಾಡುತ್ತಿರುವುದಕ್ಕೆ ಶ್ಲಾಘಿಸಿದರು.