ಅಪ್ರಾಪ್ತೆ ಮೇಲೆ 6 ಜನರಿಂದ ಗ್ಯಾಂಗ್‌ ರೇಪ್‌, ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್

KannadaprabhaNewsNetwork |  
Published : Jun 01, 2025, 11:51 PM ISTUpdated : Jun 02, 2025, 05:14 AM IST
ಅತ್ಯಾಚಾರ  | Kannada Prabha

ಸಾರಾಂಶ

ಬೆಳಗಾವಿ ಜಿಲ್ಲೆ ಕಾಕತಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆಕೆಯ ಸ್ನೇಹಿತ ಸೇರಿ 6 ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಮೊಬೈಲ್‌ನಲ್ಲಿ ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

  ಬೆಳಗಾವಿ : ಬೆಳಗಾವಿ ಜಿಲ್ಲೆ ಕಾಕತಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆಕೆಯ ಸ್ನೇಹಿತ ಸೇರಿ 6 ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಮೊಬೈಲ್‌ನಲ್ಲಿ ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಬಳಿಕ, ಆರೋಪಿಗಳು ಈ ವಿಡಿಯೋ ತೋರಿಸಿ, ಬ್ಲ್ಯಾಕ್ ಮೇಲ್ ಮಾಡಿ, ಪದೇ ಪದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಬಾಲಕರು ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆದ 2ನೇ ಗ್ಯಾಂಗ್ ರೇಪ್‌ ಪ್ರಕರಣ ಇದಾಗಿದೆ.

ಕಳೆದ ಡಿಸೆಂಬರ್‌ನಿಂದ ಅತ್ಯಾಚಾರ:

ಕಳೆದ ಡಿಸೆಂಬರ್‌ ನಲ್ಲಿ ಈ ಬಾಲಕಿಯ ಸ್ನೇಹಿತನಾಗಿರುವ ಓರ್ವ ಆರೋಪಿ, ಆಕೆಯನ್ನು ಪುಸಲಾಯಿಸಿ ಕಾಕತಿ ಗುಡ್ಡಕ್ಕೆ ಕರೆದೊಯ್ದಿದ್ದ. ಅಲ್ಲಿಗೆ ತೆರಳಿದ ಬಳಿಕ, ಮತ್ತೆ ಐವರು ಸ್ನೇಹಿತರನ್ನು ಕರೆಸಿಕೊಂಡಿದ್ದ. ಬಳಿಕ, ಆರು ಜನ ಕಾಮುಕರು ಸೇರಿ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಅಲ್ಲದೆ, ಈ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು.

ಬಳಿಕ, ಜನವರಿಯಲ್ಲಿ ಮತ್ತೆ ಕರೆ ಮಾಡಿ, ವಿಡಿಯೋ ತೋರಿಸಿ, ಬ್ಲ್ಯಾಕ್‌ಮೇಲ್‌ ಮಾಡಿ, ಮತ್ತೆ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಆ ನಂತರವೂ ಬಾಲಕಿಗೆ ಈ ವಿಡಿಯೋ ತೋರಿಸಿ, ಬ್ಲ್ಯಾಕ್‌ಮೇಲ್‌ ಮಾಡಿ, ಪದೇ ಪದೆ ಅತ್ಯಾಚಾರ ಎಸಗಿದ್ದರು.

ಇದರಿಂದ ಬೇಸತ್ತ ಬಾಲಕಿ, ತಾಯಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಐ‍ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಕುರಿತು ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭೂಷಣ ಗುಲಾಬರಾವ್‌ ಬೊರಸೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

PREV
Read more Articles on

Recommended Stories

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ
ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ