ರಾಮನಗರ: ಜಿಲ್ಲೆಯ ಸುಪುತ್ರ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯಿಂದ ಸುಮಾರು 50 ರಿಂದ 60 ಸಾವಿರ ಜನರು ಸಾಕ್ಷಿಯಾಗುವಂತೆ ಮಾಡಲು ಜಿಲ್ಲಾ ಕಾಂಗ್ರೆಸ್‌ನಲ್ಲಿ ಭರದ ಸಿದ್ದತೆಗಳು ನಡೆದಿವೆ.
ಈಗಾಗಲೇ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ರಾಮನಗರ ಮತ್ತು ಹಾರೋಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸಿದರೆ, ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಬಿಡದಿಯಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.
ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯಿಂದ ನಿರೀಕ್ಷೆಗೂ ಮೀರಿ ಜನರು ಆ ಸಂಭ್ರಮದಲ್ಲಿ ಭಾಗಿಯಾಗಲು ಬಸ್ಸು ಮತ್ತು ಊಟದ ವ್ಯವಸ್ಥೆ ಮಾಡುವುದು. ಶುಭ ಕೋರುವ ಕಟೌಟ್ ಗಳನ್ನು ಅಳವಡಿಸುವ ಬಗ್ಗೆಯೂ ಶಾಸಕರು ಮುಖಂಡರು ಮತ್ತು ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.ಬಾಕ್ಸ್.............
ರಾಮನಗರ
ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬಹಳ ದಿನಗಳ ರಾಜ್ಯದ ಜನರ ಕನಸ್ಸು ನನಸ್ಸಾಗುತ್ತಿದೆ. ಡಿ.ಕೆ.ಶಿವಕುಮಾರ್ ರವರು ಕಾಂಗ್ರೆಸ್ ಪಕ್ಷವನ್ನು ದೇವರೆಂದು ಪೂಜಿಸಿ, ಆರಾಧಿಸಿದವರು. ದೇಶದಲ್ಲಿ ಎಲ್ಲೆ ಕಾಂಗ್ರೆಸ್ ಪಕ್ಷ ಸಂಕಷ್ಟ ಸಮಯದಲ್ಲಿದ್ದಾಗ ಹೆಗಲು ಕೊಟ್ಟವರು. ಆ ಮೂಲಕ ರಾಷ್ಟ್ರಮಟ್ಟದಲ್ಲಿ ಡಿ.ಕೆ.ಶಿವಕುಮಾರ್ ಜನಮ್ನಣೆ ಗಳಿಸಿದ್ದಾರೆ. ಗ್ರಾಮ ಮಟ್ಟದಿಂದ ದೆಹಲಿ ಮಟ್ಟದವರೆಗೆ ಕಾಂಗ್ರೆಸ್ ಪಕ್ಷವನ್ನು ಹಂತ ಹಂತವಾಗಿ ಸಂಘಟಿಸಿದ ಮಹಾನ್ ಚತುರರು. ಅವರ ಕಾಯಕನಿಷ್ಟೆಯನ್ನು ಗುರುತಿಸಿ ದೆಹಲಿ ವರಿಷ್ಟರು ಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಅವರೆಲ್ಲರಿಗೂ ಜಿಲ್ಲೆಯ ಜನತೆಯ ಪರವಾಗಿ ಕೋಟಿ ನಮಸ್ಕಾರಗಳನ್ನು ತಿಳಿಸುತ್ತೇನೆ ಎಂದರು.
ಡಿ.ಕೆ.ಶಿವಕುಮಾರ್ ಸಂಕಷ್ಟದ ದಿನಗಳಲ್ಲಿ ತಿಹಾರ್ ಜೈಲಿನಿಂದ ಬಂದ ತಕ್ಷಣ ಕಾಂಗ್ರೆಸ್ ಪಕ್ಷದ ವರಿಷ್ಠರು ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ಜವಾಬ್ದಾರಿ ವಹಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪ್ರಮುಖರ ಜೊತೆ ಪ್ರತಿದಿನ ಜೂಮ್ ಮೀಟಿಂಗ್, ಹೋರಾಟಗಳು, ಸ್ವಾತಂತ್ರ ನಡಿಗೆ, ಆರೋಗ್ಯ ಹಸ್ತ, ಮೇಕೆದಾಟು ಹೋರಾಟದಂತಹ ಹತ್ತು ಹಲವು ಹೋರಾಟಗಳ ಮೂಲಕ ರಾಜ್ಯದಲ್ಲಿ ಅವರ ಸಂಘಟನೆಯ ಪರಿಶ್ರಮದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ದೊಂದಿಗೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಕೋಟ್ ...
-ಚೇತನ್‌ಕುಮಾರ್, ಅಧ್ಯಕ್ಷರು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ.
ಕೋಟ್ ...............ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನಮ್ಮ ಜಿಲ್ಲೆಯ ಜನತೆಯ ಕನಸು. ಈ ಸಮಾರಂಭಕ್ಕೆ ಜನರನ್ನು ಕರೆದುಕೊಂಡು ಹೋಗುವುದು ನಮ್ಮ ಜವಾಬ್ದಾರಿ. ಜಿಲ್ಲೆಯಿಂದ 60 ಸಾವಿರ ಜನರನ್ನು ಕರೆದುಕೊಂಡು ಹೋಗಲು ಸಿದ್ಧತೆ ಮಾಡುತ್ತಿದ್ದೇವೆ. ಅದಕ್ಕಾಗಿ ಬಸ್ಸು, ಊಟ, ತಿಂಡಿ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದೇವೆ. ಇದು ನಮ್ಮ ಕಾರ್ಯಕ್ರಮ, ನಮ್ಮ ಜಿಲ್ಲೆಯ ಕಾರ್ಯಕ್ರಮ. ಹಾಗಾಗಿ ಜವಾಬ್ದಾರಿ ತೆಗೆದುಕೊಂಡು ಪದಗ್ರಹಣಕ್ಕೆ ಸಿದ್ಧತೆ ಮಾಡುತ್ತಿದ್ದೇವೆ.
-ಇಕ್ಬಾಲ್ ಹುಸೇನ್, ಶಾಸಕರು, ರಾಮನಗರ ಕ್ಷೇತ್ರ29ಕೆಆರ್ ಎಂಎನ್ 2,3,4.ಜೆಪಿಜಿ
2.ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿದರು.3.ಎ.ಬಿ.ಚೇತನ್‌ಕುಮಾರ್, ಅಧ್ಯಕ್ಷರು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ.
4.ಇಕ್ಬಾಲ್ ಹುಸೇನ್, ಶಾಸಕರು, ರಾಮನಗರ ಕ್ಷೇತ್ರ