ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಚೇರಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಪ್ರಜಾಪ್ರಭುತ್ವ ಜನರಿಂದ ಜನರಿಗಾಗಿ ಇರುವ ಒಂದು ವ್ಯವಸ್ಥೆಯಾಗಿದ್ದು ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ ಹಾಕಿದ್ದು, ಸಂವಿಧಾನದ ಕುರಿತು ಅರಿವು ಮೂಡಿಸಲು ಸೆ.15ರಂದು ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾ ಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಿಕೆಚೀಲೂರು ವರೆಗೆ 8 ಗ್ರಾ.ಪಂ ವ್ಯಾಪ್ತಿ, ಸ್ಥಳೀಯ ಸಂಸ್ಥೆಗಳು, ನಗರ ವ್ಯಾಪ್ತಿಯನ್ನು ಒಳಗೊಂಡು ಒಟ್ಟು 60 ಕಿ.ಮೀ ಮಾನವ ಸರಪಳಿ ರಚಿಸಲು ಸಿದ್ಧತೆಯನ್ನು ನಡೆಸ ಲಾಗಿದೆ. ಇದು ಕೇವಲ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೆ ವಿದ್ಯಾರ್ಥಿಗಳು, ನಾಗರೀಕರು, ಸ್ತ್ರೀಶಕ್ತಿ ಗುಂಪು ಗಳು, ವಿವಿಧ ಸಂಘ ಸಂಸ್ಥೆಗಳು ಈ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದರು.ವಿವಿಧ ಕಲಾಮೇಳದೊಂದಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿ ಗಳು, ಸ್ಕೌಟ್ಸ್ ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಅಭ್ಯರ್ಥಿಗಳು ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಸೇರಿ ಮಾನವ ಸರಪಳಿ ನಿರ್ಮಿಲಾಗುವುದು.
ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳು, ಸಂಸ್ಥೆಗಳ ಮುಖಂಡರಿಂದ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಸಲಹೆಗಳನ್ನು ಸ್ವೀಕರಿಸಿದರು.